Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ತಮಿಳುನಾಡಿನಲ್ಲಿ ಸಿಎಂ ವಿಜಯ್ ಅವರಿಗೆ ಆರಂಭದಲ್ಲೇ ಆತಂಕ!
  • National
  • Politics
  • ಚೆನ್ನೈ

ತಮಿಳುನಾಡಿನಲ್ಲಿ ಸಿಎಂ ವಿಜಯ್ ಅವರಿಗೆ ಆರಂಭದಲ್ಲೇ ಆತಂಕ!

Praja Vahini May 20, 2026 1 minute read
WhatsApp Image 2026-05-20 at 16.09.54
Spread the love

ಚೆನ್ನೈ: ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ತಮಿಳು ಚಿತ್ರರಂಗದ ನಟ ವಿಜಯ ಅವರು ಇತ್ತೀಚಿಗಷ್ಟೇ ಹೊಸ ಪಕ್ಷ ಕಟ್ಟಿ 2026 ನೇ ಸಾಲಿನಲ್ಲಿ 108 ಸ್ಥಾನ ಗೆಲ್ಲುವ ಮೂಲಕ ರಾಜಕೀಯ ಇತಿಹಾಸದಲ್ಲಿ ಹೊಸ ಅಲೆ ಎಬ್ಬಿಸಿರುವ ಸಿಎಂ ವಿಜಯ್ ಅವರಿಗೆ ಇದೀಗ ಸಂಕಷ್ಟ ಎದುರಾದಂತೆ ಕಾಣುತ್ತಿದೆ.

ಹೌದು, ತಮಿಳುನಾಡಿನಲ್ಲಿ ಹೊಸದಾಗಿ ಸರ್ಕಾರ ರಚಿಸಿರುವ ಸಿಎಂ ಸಿ ಜೋಸೆಫ್ ವಿಜಯ್ ಅವರ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಸಂಕಷ್ಟ ಎದುರಾಗಿದೆ. ಎಐಎಡಿಎಂಕೆ ಬಂಡಾಯ ಶಾಸಕರನ್ನು ಸರ್ಕಾರಕ್ಕೆ ಸೆಳೆಯುವ ಪ್ರಯತ್ನವೇ ಇದೀಗ ಮೈತ್ರಿಕೂಟದಲ್ಲಿ ಭಾರೀ ಬಿರುಕಿಗೆ ಕಾರಣವಾಗಿದೆ.

ಟಿವಿಕೆ 108 ಸ್ಥಾನಗಳನ್ನು ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಬಹುಮತದ ಕೊರತೆಯಿಂದ ಕಾಂಗ್ರೆಸ್, ಸಿಪಿಐಎಂ, ವಿಸಿಕೆ ಮತ್ತು ಐಯುಎಂಎಲ್ ಪಕ್ಷಗಳ ಬಾಹ್ಯ ಬೆಂಬಲದೊಂದಿಗೆ ಸರ್ಕಾರ ರಚಿಸಲಾಗಿದೆ.

ಆದರೆ ಸರ್ಕಾರವನ್ನು ಮತ್ತಷ್ಟು ಬಲಪಡಿಸಲು ಎಐಎಡಿಎಂಕೆಯ 25 ಬಂಡಾಯ ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಸಿಎಂ ವಿಜಯ್ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ.

ಈ ಬೆಳವಣಿಗೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಸಿಪಿಐಎಂ ರಾಜ್ಯ ಕಾರ್ಯದರ್ಶಿ ಪಿ. ಷಣ್ಮುಗಂ, ‘ಎಐಎಡಿಎಂಕೆ ಬಂಡಾಯ ಶಾಸಕರನ್ನು ಸರ್ಕಾರಕ್ಕೆ ಸೇರಿಸಿಕೊಂಡರೆ ನಾವು ಬೆಂಬಲ ಹಿಂಪಡೆಯುತ್ತೇವೆ’ ಎಂದು ನೇರ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಹೆಚ್.ವಿಶ್ವನಾಥ್ ವಿರುದ್ಧ FIR ದಾಖಲು

ಬಿಜೆಪಿ ಹಿಂಬಾಗಿಲಿನಿಂದ ರಾಜ್ಯವನ್ನು ಆಳಬಾರದು ಎಂಬ ಕಾರಣಕ್ಕೆ ಮಾತ್ರ ಟಿವಿಕೆಗೆ ಬೆಂಬಲ ನೀಡಿದ್ದೇವೆ. ಜನರು ಡಿಎಂಕೆ ಮತ್ತು ಎಐಎಡಿಎಂಕೆ ವಿರುದ್ಧ ಮತ ಹಾಕಿದ್ದಾರೆ. ಈಗ ಅದೇ ಪಕ್ಷದ ಶಾಸಕರನ್ನು ಸರ್ಕಾರಕ್ಕೆ ಸೇರಿಸಿಕೊಳ್ಳುವುದು ಜನಾದೇಶಕ್ಕೆ ದ್ರೋಹ ಎಂದು ಅವರು ಗುಡುಗಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ಹೆಚ್.ವಿಶ್ವನಾಥ್ ವಿರುದ್ಧ FIR ದಾಖಲು
Next: ಬಿಡದಿ ಟೌನ್​​ಶಿಪ್​​ಗೆ  80% ಒಪ್ಪಿದ ರೈತರು; ಜೂನ್ ಮೊದಲ ವಾರದ ಒಳಗಾಗಿ ಪರಿಹಾರ ಬಿಡುಗಡೆ: ಡಿಕೆಶಿ

Views:

37

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.