Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • 6,000 ಕೋಟಿ ಹೂಡಿಕೆಗೆ ಆ್ಯಕ್ಸಿಸ್‌ಕೇಡ್ಸ್‌ ಏರೊಸ್ಪೇಸ್‌ ಒಲವು: ಎಂಬಿ ಪಾಟೀಲ
  • Bangalore
  • Politics
  • State

6,000 ಕೋಟಿ ಹೂಡಿಕೆಗೆ ಆ್ಯಕ್ಸಿಸ್‌ಕೇಡ್ಸ್‌ ಏರೊಸ್ಪೇಸ್‌ ಒಲವು: ಎಂಬಿ ಪಾಟೀಲ

Praja Vahini May 20, 2026 1 minute read
WhatsApp Image 2026-05-20 at 17.31.30
Spread the love

ಬೆಂಗಳೂರು: ವೈಮಾಂತರಿಕ್ಷ ಹಾಗೂ ರಕ್ಷಣಾ ವಲಯದ ಬೆಂಗಳೂರು ಮೂಲದ ಆ್ಯಕ್ಸಿಸ್‌ಕೇಡ್ಸ್‌ ಏರೊಸ್ಪೇಸ್‌ ಇನ್‌ಫ್ರಾಸ್ಟ್ರಕ್ಚರ್‌ ಪ್ರೈವೇಟ್‌ ಲಿಮಿಟೆಡ್‌, ರಾಜ್ಯದಲ್ಲಿ ₹6,000 ಕೋಟಿ ಮೊತ್ತದ ಬಂಡವಾಳ ಹೂಡಿಕೆಗೆ ಮುಂದೆ ಬಂದಿದೆ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.

ಖನಿಜ ಭವನದಲ್ಲಿ ಇಂದು (ಬುಧವಾರ ಮೇ. 20) ಕಂಪನಿಯ ಉನ್ನತಾಧಿಕಾರಿಗಳ ಜೊತೆಗೆ ನಡೆದ ವಿಸ್ತೃತ ಸಮಾಲೋಚನೆಯ ನಂತರ ಸಚಿವರು ಈ ಮಾಹಿತಿ ನೀಡಿದ್ದಾರೆ.

200 ಎಕರೆ ಪ್ರದೇಶದಲ್ಲಿ ವೈಮಾಂತರಿಕ್ಷ, ರಕ್ಷಣೆ, ಸೆಮಿಕಂಡಕ್ಟರ್‌ ಹಾಗೂ ಕೃತಕ ಬುದ್ಧಿಮತ್ತೆ (ಎಐ) ನಾವೀನ್ಯತೆ ಕ್ಷೇತ್ರಗಳಲ್ಲಿ ಉತ್ಪಾದನೆ, ಪರೀಕ್ಷೆ ಮತ್ತು ನಿರ್ವಹಣೆಯ ಸಮಗ್ರ ಕೇಂದ್ರ ಸ್ಥಾಪಿಸುವುದು ಆ್ಯಕ್ಸಿಸ್‌ಕೇಡ್ಸ್‌ ಏರೊಸ್ಪೇಸ್‌ನ ಮುಖ್ಯ ಉದ್ದೇಶವಾಗಿದೆ. ಜಾಗತಿಕ ಪಾಲುದಾರಿಕೆಯಡಿ ದೇಶೀಯವಾಗಿ ಸಂಶೋಧನೆ ಹಾಗೂ ಅಭಿವೃದ್ಧಿ ಕೇಂದ್ರವನ್ನೂ ಸ್ಥಾಪಿಸಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಕಂಪನಿಯು ಹಂತ ಹಂತವಾಗಿ ಒಟ್ಟು ₹ 6,000 ಕೋಟಿ ಬಂಡವಾಳ ಹೂಡಿಕೆ ಮಾಡಲಿದೆ. ಇದರಿಂದ ರಾಜ್ಯದಲ್ಲಿ ಪ್ರತ್ಯಕ್ಷವಾಗಿ 20 ಸಾವಿರ ಹಾಗೂ ಪರೋಕ್ಷವಾಗಿ 54 ಸಾವಿರ ಉದ್ಯೋಗಗಳು ಸೃಷ್ಟಿಯಾಗಲಿವೆ. ಕ್ಷಿಪಣಿ ತಯಾರಿಕೆಯ ಪೂರಕ ಸೌಲಭ್ಯ, ರೇಡಾರ್‌ – ಸಂವೇದಕ, ಯುದ್ಧ ವಿಮಾನಗಳ ದುರಸ್ತಿ – ನಿರ್ವಹಣೆ ಸೌಲಭ್ಯ (ಎಂಆರ್‌ಒ) ಸೇರಿದಂತೆ ವೈಮಾಂತರಿಕ್ಷ ಹಾಗೂ ರಕ್ಷಣಾ ವಲಯದ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಕಂಪನಿ ಉದ್ದೇಶಿಸಿದೆ. ಇದನ್ನೂ ಓದಿ: ಇಟಲಿ ಪ್ರಧಾನಿ ಮೆಲೋನಿಗೆ ‘ಮೆಲೋಡಿʼ ಚಾಕೋಲೇಟ್ ಕೊಟ್ಟ ಮೋದಿ

ಈ ಯೋಜನೆ ಕಾರ್ಯಗತಗೊಳಿಸಲು ಕಂಪನಿಯು ದೇವನಹಳ್ಳಿ ಬಳಿ ಭೂಮಿ ಒದಗಿಸಲು ಮನವಿ ಮಾಡಿಕೊಂಡಿದೆ. 1.8 ಕಿ.ಮೀ ಉದ್ದದ ರನ್ ವೇ ನಿರ್ಮಾಣದ ಉದ್ದೇಶ ಕೂಡ ಇದೆ ಎಂದು ಕಂಪನಿ ಹೇಳಿದ್ದು, ಹಾಗಾದರೆ ಹಾಸನ, ವಿಜಯಪುರ ಹಾಗೂ ಶಿವಮೊಗ್ಗ ವಿಮಾನ ನಿಲ್ದಾಣಗಳನ್ನು ಬೇಕಾದರೂ ಪರಿಗಣಿಸಬಹುದು ಎಂದು ಸಚಿವರು ಸಲಹೆ ನೀಡಿ್ದಾರೆ. ಹಾಲಿ ಇರುವ ದೇವನಹಳ್ಳಿ ಘಟಕದ ಸನಿಹದಲ್ಲೇ ಈ ಉದ್ದೇಶಿತ ಘಟಕ ಇರಬೇಕು ಎನ್ನುವ ಬೇಡಿಕೆಯನ್ನು ಸಂಸ್ಥೆ ಪ್ರತಿನಿಧಿಗಳು ತಿಳಿಸಿದರು. ನಂತರ ಸಚಿವರು ರನ್ ವೇ ನಿರ್ಮಾಣಕ್ಕೂ ಅನುಕೂಲ ಇರುವ ಕಡೆ ಜಾಗ ಗುರುತಿಸಲು ಅಧಿಕಾರಿಗಳಿಗೆ ಸೂಚಿಸಿದರು.

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎನ್‌. ಸೆಲ್ವಕುಮಾರ್‌, ಕೈಗಾರಿಕಾ ಇಲಾಖೆ ಆಯುಕ್ತೆ ಖುಷ್ಬೂ ಗೋಯಲ್‌, ಮೂಲಸೌಕರ್ಯ ಇಲಾಖೆ ಕಾರ್ಯದರ್ಶಿ ವಿಶಾಲ್, ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ, ಆ್ಯಕ್ಸಿಸ್‌ಕೇಡ್ಸ್‌ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಶಾರಧಿ ಚಂದ್ರ ಬಾಬು, ನಿರ್ದೇಶಕ ಸುರೇಶ ಕುಮಾರ್, ಪ್ರಧಾನ ವ್ಯವಸ್ಥಾಪಕ (ಪ್ರಾಜೆಕ್ಟ್ಸ್) ಎನ್. ಕೆ. ಸತೀಶ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಇಟಲಿ ಪ್ರಧಾನಿ ಮೆಲೋನಿಗೆ ‘ಮೆಲೋಡಿʼ ಚಾಕೋಲೇಟ್ ಕೊಟ್ಟ ಮೋದಿ
Next: ಬೆಂಕಿಗೆ ಸುಟ್ಟು ಕರಕಲಾದ ಮನೆ; ಕುಟುಂಬಸ್ಥರ ನೆರವಿಗೆ ನಿಂತ ದಿನೇಶ್ ಗುಂಡೂರಾವ್

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.