Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಚಿಲ್ಲರೆ ರಾಜಕಾರಣಕ್ಕೆ ನಾನು ಹೆದರಲ್ಲ ಸಿಟಿ ರವಿ
  • Politics
  • State
  • ಚಿಕ್ಕಮಗಳೂರು

ಚಿಲ್ಲರೆ ರಾಜಕಾರಣಕ್ಕೆ ನಾನು ಹೆದರಲ್ಲ ಸಿಟಿ ರವಿ

Praja Vahini May 21, 2026
WhatsApp Image 2026-05-21 at 15.48.35
Spread the love

ಚಿಕ್ಕಮಗಳೂರು: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರು ಒಬ್ಬರಿಗೊಬ್ಬರು ಕೈ ಮಿಲಾಯಿಸಿ ಕಿತ್ತಾಡುತ್ತಿರುವ ಘಟನೆ ಹೆಚ್ಚಾಗಿ ಕಂಡು ಬರುತ್ತಿದ್ದು, ಇದೀಗ ಚಿಕ್ಕಮಗಳೂರು ನಗರದ ರಾಂಪುರ ಗ್ರಾಮದಲ್ಲಿ ಕಾಮಗಾರಿ ವೀಕ್ಷಣೆಗೆ ಬಂದಿದ್ದ ಪರಿಷತ್​​ ಸದಸ್ಯ ಸಿ.ಟಿ ರವಿ ವಿರುದ್ಧ ಗೋಬ್ಯಾಕ್​​ ಘೋಷಣೆ ಕೂಗಿದ ಪರಿಣಾಮ, ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೈಡ್ರಾಮಾವೇ ನಡೆದಿದೆ.

ಹೌದು ಇಂದು (ಗುರುವಾರ ಮೇ 21) ರಾಂಪುರದಿಂದ ಶಕ್ತಿ ನಗರದವರೆಗೂ ಕಾಮಗಾರಿಗಳ ವೀಕ್ಷಣೆ ಮಾಡಿ ಸಿ.ಟಿ. ರವಿ ವಾಪಸ್​​ ಬರುತ್ತಿದ್ದ ವೇಳೆ ರಾಂಪುರ ಬಳಿ ಕಾಂಗ್ರೆಸ್ ಕಾರ್ಯಕರ್ತರು ಜಮಾವಣೆಯಾಗಿದ್ದಾರೆ. ಈ ವೇಳೆ ಕಾಂಗ್ರೆಸ್​​ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಎದುರಾಗಿದ್ದು, ಎರಡೂ ಕಡೆಯಿಂದ ಘೋಷಣೆಗಳು ಮೊಳಗಿವೆ. ಇದು ವಿಕೋಪಕ್ಕೆ ಹೋಗಿ ಸಿ.ಟಿ. ರವಿ ಸಮ್ಮುಖದಲ್ಲಿಯೇ ಕಾರ್ಯಕರ್ತರು ಪರಸ್ಪರ ಕೈ ಕೈ ಮಿಲಾಯಿಸಿದ್ದಾರೆ. ಬಳಿಕ ಬಿಜೆಪಿ ಕಾರ್ಯಕರ್ತರು ಮತ್ತು ಸಿ.ಟಿ ರವಿ ರಸ್ತೆ ಮಧ್ಯೆ ಧರಣಿ ಕುಳಿತ ಪ್ರಸಂಗ ನಡೆದಿದೆ.

ಈ ಗಲಾಟೆಯಲ್ಲಿ ಸಿಟಿ ರವಿ ಮಾತನಾಡಿ, ನಾನು ಈ ಚಿಲ್ಲರೆ ರಾಜಕಾರಣಕ್ಕೆ ಹೆದರಲ್ಲ. ಸತ್ಯವನ್ನು ಹೇಳಿಯೇ ಹೇಳುತ್ತೇವೆ. ಇಂತಹ ಗೂಂಡಾಗಳನ್ನು ಎದರಿಸಿಯೇ ನಾವು ಇಲ್ಲಿಯವರೆಗೆ ಬಂದಿದ್ದೇವೆ. ನನ್ನ ಮೇಲೆ ಹಲ್ಲೆಯ ಪ್ರಯತ್ನವೂ ನಡೆದಿದ್ದು, ಹೆದರಿ ಓಡಿಹೋಗುವ ಜಾಯಮಾನ ನನ್ನದಲ್ಲ ಎಂದವರು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತದ ಬಗ್ಗೆ ಸಿಎಂ ಹೇಳಿದ್ದೇನು?

ಇನ್ನು ಶಾಸಕ ತಮ್ಮಯ್ಯ ವಿರುದ್ಧ ಸಿ.ಟಿ. ರವಿ ವಾಗ್ದಾಳಿ ನಡೆಸಿದ್ದು, 5800 ಕೋಟಿ ಅನುದಾನ, ಮೆಡಿಕಲ್‌ ಕಾಲೇಜು ತಂದದ್ದು ನಾನು. 2022ರಲ್ಲಿ ಮಂಜೂರಾದ ಕಾಮಗಾರಿಗೆ ಈಗ ವರ್ಕ್ ಆರ್ಡರ್ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ಕಾಮಗಾರಿ ವೀಕ್ಷಣೆಗೆ ಬಂದ ವೇಳೆ ಕೆಲ ಚೇಲಾಗಳನ್ನು ಬಿಟ್ಟು ಗಲಾಟೆ ಮಾಡಿಸಿದ್ದಾರೆ ಎಂದು ಆರೋಪಿಸಿದರು.

About the Author

Praja Vahini

Editor

View All Posts

Spread the love

Post navigation

Previous: ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತದ ಬಗ್ಗೆ ಸಿಎಂ ಹೇಳಿದ್ದೇನು?
Next: ಕಾವೇರಿ ತಟದಲ್ಲಿರುವ ದೇವಸ್ಥಾನಕ್ಕೆ ಭಕ್ತಿಯ ಪರಂಪರೆಯಿದೆ: ಡಿಕೆಶಿ ​​

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.