ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ಈಗಾಗಲೇ ಹಲವು ಆರೋಪಗಳ ಮಾಡುತ್ತಿರುವ ಬೆನ್ನೆಲೆ ಇದೀಗ ಆಳಂದದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರವು ವಾಪಸ್ ಪಡೆದಿರುವುದರಿಂದ ರಾಜ್ಯ ರಾಜಕೀಯದಲ್ಲಿ ವಿಪಕ್ಷ ನಾಯಕರುಗಳ ಕಂಗೆಣ್ಣಿಗೆ ಗುರಿಯಾದಂತೆ ಕಾಣುತ್ತಿದೆ.
ಹೌದು, (ಗುರುವಾರ ಮೇ. 21) ನಿನ್ನೆ ನಡೆದ ಸಚಿವ ಸಂಪುಟದಲ್ಲಿ ಕಲಬುರ್ಗಿಯ ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ ಪಡೆದಿದೆ. ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ ಖಾದರ್ ಮನವಿ ಮೇರೆಗೆ ಈ ಕೇಸ್ ವಾಪಸ್ ಪಡೆದುಕೊಂಡಿದೆ. ಈ ಮೂಲಕ ಮುಸ್ಲಿಂ ಯುವಕರು ಹಾಗೂ ಕೆಲ ಮುಖಂಡರಿಗೆ ಬಿಗ್ ರಿಲೀಫ್ ಸಿಕ್ಕಿದೆ.
2022ರ ಶಿವರಾತ್ರಿಯಂದು ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗದ ಪೂಜೆಯ ಸಂದರ್ಭದಲ್ಲಿ ದೊಡ್ಡ ಗಲಾಟೆಯಾಗಿ ರಾಜ್ಯಾದ್ಯಂತ ಸುದ್ದಿಯಾಗಿತ್ತು. ಕಿಡಿಗೇಡಿಗಳು ರಾಘವ ಚೈತನ್ಯ ಶಿವಲಿಂಗದ ಮೇಲೆ ಮಲಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿದ್ದರು.
ಬಳಿಕ ಅದನ್ನ ಸ್ವಚ್ಛಗೊಳಿಸಿ ಪೂಜೆಗೆ ಅಂತ ತೆರಳಿದ್ದ ಅಂದಿನ ಕೇಂದ್ರ ಸಚಿವ ಭಗವಂತ ಖೂಬಾ, ಶಾಸಕ ಹಾಗೂ ಡಿಸಿ, ಎಸ್ಪಿ ಕಾರಿನ ಮೇಲೆ ಬಡಿಗೆಗಳಿಂದ ಹೊಡೆದು ಕಲ್ಲು ತೂರಾಟ ಮಾಡಿ ಮಾರಕಾಸ್ತ್ರಗಳನ್ನು ಪ್ರದರ್ಶನ ಮಾಡಲಾಗಿತ್ತು. ಇದನ್ನೂ ಓದಿ: ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ
ಹೀಗಾಗಿ ಈ ಗಲಾಟೆ ಪ್ರಕರಣ ಸಂಬಂಧ ವಿವಿದ ಮುಸ್ಲಿಂ ಮುಖಂಡರು ಹಾಗೂ ಯುವಕರ ವಿರುದ್ಧ ದಾಖಲಾಗಿದ್ದ ಒಟ್ಟು 13 ಪ್ರಕರಣಗಳನ್ನ ರಾಜ್ಯ ಸರ್ಕಾರ ಹಿಂಪಡೆದುಕೊಂಡಿದೆ. ಇದರ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ.
