Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಿಎಂ ಸಿದ್ದರಾಮಯ್ಯನವರೇ ಹಿಂದೂ ಧರ್ಮದ ಬಗ್ಗೆ ಕನಿಷ್ಟ ಗೌರವ ಇದೆಯಾ ನಿಮಗೆ?: ಬಿವೈವಿ
  • Bangalore
  • Politics
  • State

ಸಿಎಂ ಸಿದ್ದರಾಮಯ್ಯನವರೇ ಹಿಂದೂ ಧರ್ಮದ ಬಗ್ಗೆ ಕನಿಷ್ಟ ಗೌರವ ಇದೆಯಾ ನಿಮಗೆ?: ಬಿವೈವಿ

Praja Vahini May 22, 2026 1 minute read
WhatsApp Image 2026-05-22 at 14.48.31
Spread the love

ಬೆಂಗಳೂರು: ನಾಚಿಕೆಗೆಟ್ಟ ಕಾಂಗ್ರೆಸ್ ಸರ್ಕಾರವು ಅಲ್ಪಸಂಖ್ಯಾತರ ಮತ ಓಲೈಕೆಗಾಗಿ ಇದೀಗ ಕಲಬುರಗಿಯ ಆಳಂದದ ಲಾಡ್ಲೆ ಮಶಾಕ್ ದರ್ಗಾ ಕೇಸ್ ಹಿಂಪಡೆದು ಅಲ್ಪಸಂಖ್ಯಾತರ ದೃಷ್ಟಿಯಲ್ಲಿ ಒಳ್ಳೆಯವರು ಎನಿಸಿಕೊಂಡ ಕಾಂಗ್ರೆಸ್ ಸರ್ಕಾರದವರು ನಾಚಿಕೆ ಇಲ್ಲದೆ ನೈತಿಕತೆ, ಗೌರವಗಳನ್ನೆಲ್ಲ ಗಾಳಿಗೆ ತೂರಿ ಎಲ್ಲಾ ಮಿತಿಗಳನ್ನು ಈ ತುಘಲಕ್ ಕಾಂಗ್ರೆಸ್ ಸರ್ಕಾರ ದಾಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಅವರು, ಸರ್ಕಾರದ ವೋಟ್ ಬ್ಯಾಂಕ್ ಓಲೈಕೆಯ ಕೀಳು ರಾಜಕೀಯ ಮತ್ತು ಅಲ್ಪಸಂಖ್ಯಾತರ ತುಷ್ಟೀಕರಣದ ಪರಮಾವಧಿಯ ನಿರ್ಲಜ್ಜ ಪ್ರದರ್ಶನಕ್ಕೆ ರಾಜ್ಯ ಈಗ ಸಾಕ್ಷಿಯಾಗಿದೆ. ಕನಿಷ್ಠ ಜವಾಬ್ದಾರಿಯೂ ಇಲ್ಲದೆ, ನೈತಿಕತೆ, ಗೌರವಗಳೆಲ್ಲವನ್ನೂ ಗಾಳಿಗೆ ತೂರಿ, ಸಭ್ಯತೆಯ ಎಲ್ಲಾ ಮಿತಿಗಳನ್ನೂ ಈ ತುಘಲಕ್ ಕಾಂಗ್ರೆಸ್ ಸರ್ಕಾರ ದಾಟಿದೆ.

ಕಲಬುರಗಿಯ ಆಳಂದದ ಲಾಡ್ಲೆ ಮಶಾಕ್ ದರ್ಗಾದಲ್ಲಿ ಪವಿತ್ರ ರಾಘವ ಚೈತನ್ಯ ಶಿವಲಿಂಗದ ಮೇಲೆ ಮಲಮೂತ್ರ ವಿಸರ್ಜನೆ ಮಾಡಿ ವಿಕೃತಿ, ದಾರ್ಷ್ಟ್ಯ ಮೆರೆದಿದ್ದಲ್ಲದೆ, ಆ ಸಮಯದಲ್ಲಿ ಅಂದಿನ ಕೇಂದ್ರ ಸಚಿವರು, ಜಿಲ್ಲಾಧಿಕಾರಿ ಹಾಗೂ ಎಸ್ಪಿಯವರ ವಾಹನಗಳ ಮೇಲೆ ಮಾರಕಾಸ್ತ್ರಗಳಿಂದ ಕಲ್ಲು ತೂರಾಟ ನಡೆಸಿದ್ದ ಘೋರ ಅಪರಾಧ ಮತ್ತು ಹೀನಾಯ ಕೋಮು ಗಲಭೆಯ 13 ಪ್ರಕರಣಗಳನ್ನು ಈ ತುಘಲಕ್ ಸರ್ಕಾರ ವಾಪಸ್ ಪಡೆದಿರುವುದನ್ನು ಅತ್ಯಂತ ಕಟುವಾಗಿ ಖಂಡಿಸುತ್ತೇನೆ.

ಸಮಾಜದ ಶಾಂತಿ ಕದಡಿದ ಇಂತಹ ಗಂಭೀರ ಅಪರಾಧದ ಸಮಾಜವಿರೋಧಿ ಕಿಡಿಗೇಡಿಗಳನ್ನು ರಾಜಾರೋಷವಾಗಿ ಮುಕ್ತಗೊಳಿಸುವ ಮೂಲಕ  ಸಮಾಜಕ್ಕೆ ಏನು ಸಂದೇಶ ನೀಡುತ್ತಿದ್ದೀರಿ ಮುಖ್ಯಮಂತ್ರಿಗಳೇ? ಈ ಕಾಂಗ್ರೆಸ್ ಸರ್ಕಾರಕ್ಕೆ, ಹಿಂದೂ ಧರ್ಮದ ಬಗ್ಗೆ ಕನಿಷ್ಟ ಗೌರವ, ಹಿಂದೂಗಳ ಮನಸ್ಸಿಗೆ ಆಗಿರುವ ನೋವು, ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಕನಿಷ್ಠ ಸಂವೇದನೆ, ಗೌರವವಾದರೂ ಉಳಿದಿದೆಯೇ? ಇದನ್ನೂ ಓದಿ: ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್; ವಿಪಕ್ಷಗಳ ಕಂಗೆಣ್ಣಿಗೆ ಗುರಿಯಾದ ಸರ್ಕಾರ

ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯಬೇಕಾದ ವಿಧಾನಸಭಾ ಸಭಾಧ್ಯಕ್ಷರಾದ ಮಾನ್ಯ ಶ್ರೀ ಯು.ಟಿ.ಖಾದರ್ ಅವರೇ ಸ್ವತಃ ಈ ದುರುಳ ದಗಾಕೋರರ ಪ್ರಕರಣಗಳನ್ನು ಹಿಂಪಡೆಯಲು ಶಿಫಾರಸು ಮಾಡಿರುವ ವರದಿ ಮತ್ತಷ್ಟು ಖೇದನೀಯ ಮಾತ್ರವಲ್ಲ ಪ್ರಜಾಪ್ರಭುತ್ವಕ್ಕೆ ಬಗೆದ ದ್ರೋಹ! ಇದು ನಿಜಕ್ಕೂ ಅತ್ಯಂತ ದುರ್ದೈವದ ಸಂಗತಿ. ಕೇವಲ ನಿಮ್ಮ ಕೊಳಕು ಓಲೈಕೆಗಾಗಿ, ಸಮಾಜಘಾತುಕ ಶಕ್ತಿಗಳಿಗೆ, ಅಪರಾಧಿಗಳಿಗೆ ಕ್ಲೀನ್ ಚೀಟ್ ನೀಡುತ್ತಿರುವ ಮುಖ್ಯಮಂತ್ರಿ ಶ್ರೀ Siddaramaiah ಅವರೇ, ಬಹುಸಂಖ್ಯಾತರ ಧಾರ್ಮಿಕ ಭಾವನೆಗಳನ್ನು ಹಾಗೂ ನಾಡಿನ ಸುರಕ್ಷತೆಯನ್ನು ಮುಸ್ಲಿಂ ವೋಟ್ ಬ್ಯಾಂಕಿಗೆ ಅಡವಿಟ್ಟಿರುವ ನಿಮ್ಮ ಈ ಜನವಿರೋಧಿ ಧೋರಣೆಯನ್ನು ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲಎಂದಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್; ವಿಪಕ್ಷಗಳ ಕಂಗೆಣ್ಣಿಗೆ ಗುರಿಯಾದ ಸರ್ಕಾರ
Next: ವಚನಾನಂದ ಸ್ವಾಮೀಜಿಗೆ ಶುರುವಾಯ್ತು ಬಂಧನದ ಭೀತಿ!

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.