ಬೆಂಗಳೂರು: ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಜಿಬಿಎ ಚುನಾವಣೆಗೆ ಸುಪ್ರೀಂ ಕೋರ್ಟ್ ಈಗಾಗಲೇ ಹಲವು ಬಾರಿ ಕಡುವು ನೀಡಿದರು ಕೂಡ ರಾಜ್ಯದಲ್ಲಿ ಯಾವುದೇ ರೀತಿ ಚುನಾವಣೆ ನಡೆಸಲು ಆಗುತ್ತಿಲ್ಲ. ಹಾಗಾಗಿ ಕೊನೆಯದಾಗಿ ಸುಪ್ರೀಂ ಕೋರ್ಟ್ ರಾಜ್ಯದಲ್ಲಿ ಆಗಸ್ಟ್ 31ರ ಒಳಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ನಡೆಸಬೇಕು ಎಂದು ಕೊನೆಯ ಅವಕಾಶ ನೀಡಿದೆ.
ಇನ್ನು ಆಗಸ್ಟ್ 31ರ ಒಳಗಾಗಿ ಜಿಬಿಎ ಚುನಾವಣೆ ನಡೆಸಲು ಅಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾದ ಪೊಣ್ಣನ ಅವರು ತಿಳಿಸಿದ್ದಾರೆ.
ಈ ಕುರಿತು ಇಂದು (ಶುಕ್ರವಾರ ಮೇ 22) ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ನಡೆಸಲು ಸಿಬ್ಬಂದಿ ಕೊರತೆ ಎದುರಾಗಿದೆ. ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಆಗಸ್ಟ್ 31ರ ಗಡುವಿನೊಳಗೆ ಚುನಾವಣೆ ನಡೆಸುವುದು ಕಷ್ಟಕರವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ವಚನಾನಂದ ಸ್ವಾಮೀಜಿಗೆ ಶುರುವಾಯ್ತು ಬಂಧನದ ಭೀತಿ!
ಅಧಿಕಾರಿಗಳು ಈಗಾಗಲೇ ಜನಗಣತಿ ಹಾಗೂ ಆಸ್ತಿ ಹಕ್ಕುಗಳ ಸಮೀಕ್ಷೆ ನಂತಹ ಪ್ರಮುಖ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣೆ ನಡೆಸಲು ಅಗತ್ಯ ಸಿಬ್ಬಂದಿ ಲಭ್ಯವಿಲ್ಲ. ಹೀಗಾಗಿ, ಸುಪ್ರೀಂ ಕೋರ್ಟ್ಗೆ ಹೆಚ್ಚಿನ ಸಮಯಾವಕಾಶ ನೀಡುವಂತೆ ಮನವಿ ಮಾಡಲಾಗಿದ್ದು, ಆದರೆ ಕೇಳಿದಷ್ಟು ಸಮಯ ಸಿಕ್ಕಿಲ್ಲ. ಸಿಬ್ಬಂದಿ ಇಲ್ಲದೆ ಚುನಾವಣೆ ಹೇಗೆ ನಡೆಸಬೇಕು ಎಂದು ರಾಜ್ಯ ಚುನಾವಣಾ ಆಯೋಗವೇ ನಿರ್ಧರಿಸಬೇಕು ಎಂದು ಪೊನ್ನಣ್ಣ ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರದ ಆದೇಶಗಳಂತೆ ಜನಗಣತಿ ಮತ್ತು ಎಸ್ಐಆರ್ ಕಾರ್ಯಗಳು ಕಡ್ಡಾಯವಾಗಿ ನಡೆಯುತ್ತವೆ ಎಂದರು.
