Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಫಾಯಿ ಕರ್ಮಚಾರಿಗಳಿಗೆ ಬದುಕು ಕಲ್ಪಿಸುವೆಡೆ ಸರ್ಕಾರದ ಐತಿಹಾಸಿಕ ನಿರ್ಧಾರ: ಹೆಚ್ ಸಿ.ಮಹದೇವಪ್ಪ
  • Bangalore
  • Politics
  • State

ಸಫಾಯಿ ಕರ್ಮಚಾರಿಗಳಿಗೆ ಬದುಕು ಕಲ್ಪಿಸುವೆಡೆ ಸರ್ಕಾರದ ಐತಿಹಾಸಿಕ ನಿರ್ಧಾರ: ಹೆಚ್ ಸಿ.ಮಹದೇವಪ್ಪ

Praja Vahini May 22, 2026
WhatsApp Image 2026-05-22 at 18.11.52
Spread the love

ಬೆಂಗಳೂರು: ಮ್ಯಾನುಯಲ್ ಸ್ಕ್ಯಾವೆಂಜರ್ ನಂತಹ ಅಮಾನವೀಯ ಪದ್ದತಿಯು ರದ್ದಾಗಿದ್ದರೂ ಕೂಡಾ ಎಷ್ಟೋ ಸಲ ಸರ್ಕಾರದ ಗಮನಕ್ಕೆ ಬಾರದ ರೀತಿಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳನ್ನು ಬಳಸಿಕೊಳ್ಳುವ ಕೆಲಸ ಮಾಡಲಾಗುತ್ತಿದೆ ಎಂದು ಸಚಿವ ಡಾ.ಹೆಚ್ ಸಿ.ಮಹದೇವಪ್ಪ ಹೇಳಿದರು.

ವಿಕಾಸಸೌಧದಲ್ಲಿ ಇಂದು ಶು(ಕ್ರವಾರ ಮೇ 22) ಮ್ಯಾನುಯಲ್ ಸ್ಕ್ಯಾವೆಂಜರ್ ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ 2013 ರ ಸೆಕ್ಷನ್ 26 ರ ಅಡಿ ನಡೆಯುವ  9ನೇ ರಾಜ್ಯ ಮೇಲ್ವಿಚಾರಣೆ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, 21 ನೇ ಶತಮಾನದಲ್ಲಿ ಜಗತ್ತು ಯಾಂತ್ರಿಕವಾಗಿ ಬಹಳಷ್ಟು ಮುಂದುವರೆದಿದ್ದು,  ಸ್ವಚ್ಛತಾ ಕಾರ್ಯಗಳಿಗೆ ಮ್ಯಾನುಯಲ್ ಸ್ಕ್ಯಾವೆಂಜರ್ ಗಳನ್ನು ಬಳಸಿಕೊಳ್ಳದೇ ಯಂತ್ರಗಳನ್ನೇ ಬಳಸಿಕೊಳ್ಳುವ ರೀತಿಯ ವಾತಾವರಣವು ಹೆಚ್ಚಾಗಬೇಕಿದೆ ಎಂದು ಮಾನ್ಯ ಸಚಿವರು ಹೇಳಿದರು.

ಈ ರಾಜ್ಯದಲ್ಲಿ ಸುಮಾರು 7000 ಕ್ಕೂ ಹೆಚ್ಚು ಮಂದಿ ಸಫಾಯಿ ಕರ್ಮಚಾರಿಗಳು ಇದ್ದು ಅವರೆಲ್ಲರಿಗೂ ಬದುಕಿನ ಭದ್ರತೆ, ವಸತಿ ಸೌಲಭ್ಯ, ಉದ್ಯೋಗ ಸೌಲಭ್ಯ ಹಾಗೂ ಅವರ ಮೂಲ ಸೌಕರ್ಯವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸರ್ಕಾರದ ಎಲ್ಲ ಇಲಾಖೆಗಳೂ ಕೂಡಾ ವ್ಯವಸ್ಥಿತವಾಗಿ ಶ್ರಮಿಸಬೇಕು ಎಂದು ಅವರು ತಿಳಿಸಿದರು.

ನಮ್ಮ ರಾಜ್ಯದಲ್ಲಿರುವ ಈ ಸಫಾಯಿ ಕರ್ಮಚಾರಿಗಳ ಸಂಖ್ಯೆ, ಅವರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಪರಿಸ್ಥಿತಿ ಏನಾಗಿದೆ ಎಂಬುದರ ಬಗ್ಗೆ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾದವರು ರಾಜ್ಯಾದ್ಯಂತ ಪ್ರವಾಸ ಮಾಡಿ ದತ್ತಾಂಶ ಸಂಗ್ರಹಿಸಿದ್ದು ಈ ದತ್ತಾಂಶದ ಆಧಾರದ ಮೇಲೆಯೇ ಸಫಾಯಿ ಕರ್ಮಚಾರಿಗಳಿಗೆ ವಸತಿ, ಶಿಕ್ಷಣ ಮತ್ತು ಇತರೆ ಮೂಲ ಸೌಕರ್ಯ ಹಾಗೂ ಆರೋಗ್ಯ ಸೌಲಭ್ಯವನ್ನು ನೀಡಲು ಸರ್ಕಾರ ನಿರ್ಧರಿಸಿದ್ದು ಇದೊಂದು ಐತಿಹಾಸಿಕ ಹೆಜ್ಜೆಯಾಗಿದೆ ಎಂದು ಮಾನ್ಯ ಸಚಿವರು ತಿಳಿಸಿದರು. ಇದನ್ನೂ ಓದಿ: ಬಡವರ ಮತದಾನದ ಹಕ್ಕನ್ನ ತೆಗೆದು ಹಾಕಲು ದೊಡ್ಡ ಸಂಚು ನಡೆಯುತ್ತಿದೆ: ಡಿಕೆಶಿ

ಕರೋನಾ ಸಂದರ್ಭದಲ್ಲಿ ಅತಿ ಹೆಚ್ಚು ಕೆಲಸ ಮಾಡಿದ ಶ್ರಮಿಕ ವರ್ಗದಲ್ಲಿ ಸಫಾಯಿ ಕರ್ಮಚಾರಿಗಳ ಪಾತ್ರ ದೊಡ್ಡದು, ಇಂತಹ ಸಫಾಯಿ ಕರ್ಮಚಾರಿಗಳ ಬದುಕಿನ ಹಿತ ಕಾಪಾಡುವುದು ನಮ್ಮ ಸರ್ಕಾರದ ಆದ್ಯ ಕರ್ತವ್ಯ ಆಗಿದ್ದು ಈ ದಿಸೆಯಲ್ಲಿ ಅರ್ಥಿಕ ಇಲಾಖೆಯು ಹೆಚ್ಚು ಯೋಚನೆ ಮಾಡದೇ ಅವರ ಬದುಕು ಕಟ್ಟಿಕೊಳ್ಳುವುದಕ್ಕೆ ಪೂರಕವಾಗಿ ಹಣಕಾಸು ಸೌಲಭ್ಯವನ್ನು ಬಿಡುಗಡೆ ಮಾಡಬೇಕು ಎಂದು ಈ ವೇಳೆ ಅವರು ಆರ್ಥಿಕ ಇಲಾಖೆಗೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.

About the Author

Praja Vahini

Editor

View All Posts

Spread the love

Post navigation

Previous: ನಿಮ್ಮ ಮುಖ ಪಳಪಳ ಹೊಳಿಬೇಕಾ? ಹಾಗಾದ್ರೆ ನಿಂಬೆಹಣ್ಣಿನ ಸಿಪ್ಪೆ ಬಳಸಿ!
Next: ಕಲಬುರಗಿಯಲ್ಲಿ ಪಿಎಂ ಮಿತ್ರ ಜವಳಿ ಪಾರ್ಕ್ ನಿರ್ಮಾಣ

Views:

20

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.