Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಲಬುರಗಿಯಲ್ಲಿ ಪಿಎಂ ಮಿತ್ರ ಜವಳಿ ಪಾರ್ಕ್ ನಿರ್ಮಾಣ
  • Bangalore
  • Politics
  • State

ಕಲಬುರಗಿಯಲ್ಲಿ ಪಿಎಂ ಮಿತ್ರ ಜವಳಿ ಪಾರ್ಕ್ ನಿರ್ಮಾಣ

Praja Vahini May 22, 2026 1 minute read
WhatsApp Image 2026-05-22 at 18.22.12
Spread the love

ಬೆಂಗಳೂರು: ಕಲಬುರಗಿಯಲ್ಲಿ ಸ್ಥಾಪನೆಯಾಗಲಿರುವ ಮಹತ್ವಾಕಾಂಕ್ಷಿ ‘ಪಿಎಂ ಮಿತ್ರ ಜವಳಿ ಪಾರ್ಕ್’ ಯೋಜನೆಯ ಕಾಮಗಾರಿಗಳನ್ನು ಅತ್ಯಂತ ವೇಗವಾಗಿ ಚುರುಕುಗೊಳಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತು ರಾಜ್ಯದ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ಶಾಲಿನಿ ರಜನೀಶ್‌  ಅವರು  ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಕೈಗಾರಿಕಾ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ನಡೆಸಿದ ಮಹತ್ವದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಪರಿಷ್ಕೃತ ಯೋಜನಾ ವರದಿ (DPR) ಸಿದ್ಧತೆ

ಕಲಬುರಗಿ ಪಾರ್ಕ್‌ನ ಬಾಹ್ಯ ಮೂಲಸೌಕರ್ಯ ಕಾಮಗಾರಿಗಳನ್ನು ಒಳಗೊಂಡಂತೆ ಸಮಗ್ರ ಯೋಜನಾ ವರದಿಯನ್ನು (DPR) ತಕ್ಷಣವೇ ಪರಿಷ್ಕರಿಸಿ, ಭಾರತ ಸರ್ಕಾರದ ಯೋಜನಾ ಅನುಮೋದನೆ ಸಮಿತಿ (PAC) ಗೆ ಸಲ್ಲಿಸಲು ಕೈಮಗ್ಗ ಮತ್ತು ಜವಳಿ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಭೂಮಿ ಹಂಚಿಕೆ ಮತ್ತು ಆಂತರಿಕ ಕಾಮಗಾರಿ:

ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (KIADB) ಮೂಲಕ ಪಾರ್ಕ್‌ನ ಮೊದಲ ಹಂತದ ಅಭಿವೃದ್ಧಿ ಕಾಮಗಾರಿಗಳನ್ನು ತಕ್ಷಣವೇ ಆರಂಭಿಸಲು ಸಭೆಯಲ್ಲಿ ಚರ್ಚಿಸಲಾಯಿತು. ಮೊದಲ ಹಂತದ ಯಶಸ್ವಿ ಅನುಷ್ಠಾನದ ನಂತರವಷ್ಟೇ, ಉದ್ಯೋಗ ಸೃಷ್ಟಿ ಮತ್ತು ಹೂಡಿಕೆ ಪ್ರಮಾಣವನ್ನು ಆಧರಿಸಿ ಎರಡನೇ ಹಂತದ ಅಭಿವೃದ್ಧಿಗೆ ಚಾಲನೆ ನೀಡಲು ಸಭೆ ನಿರ್ಧರಿಸಿತು ಎಂದೂ ಸಚಿವರು ವಿವರಗಳನ್ನು ನೀಡಿದ್ದಾರೆ. ಇದನ್ನೂ ಓದಿ: ಸಫಾಯಿ ಕರ್ಮಚಾರಿಗಳಿಗೆ ಬದುಕು ಕಲ್ಪಿಸುವೆಡೆ ಸರ್ಕಾರದ ಐತಿಹಾಸಿಕ ನಿರ್ಧಾರ: ಹೆಚ್ ಸಿ.ಮಹದೇವಪ್ಪ

ಕೇಂದ್ರ ಸರ್ಕಾರದ ‘ಅಭಿವೃದ್ಧಿ ಬಂಡವಾಳ ಬೆಂಬಲ’ (DCS) ಯೋಜನೆಯಡಿ ಒಟ್ಟು ಯೋಜನಾ ವೆಚ್ಚದ ಶೇ. 30 ರಷ್ಟು (ಗರಿಷ್ಠ ₹500 ಕೋಟಿ) ಧನಸಹಾಯ ಲಭ್ಯವಾಗಲಿದ್ದು, ಇದನ್ನು ಎರಡು ಹಂತಗಳಲ್ಲಿ ಬಳಸಿಕೊಳ್ಳಲಾಗುವುದು. ಕೇಂದ್ರದ ಮಾರ್ಗಸೂಚಿಗಳ ಪ್ರಕಾರ, ಪಾರ್ಕ್‌ನ ಗೇಟ್‌ನಿಂದ ಹೊರಗಡೆ ನಡೆಯುವ ಬಾಹ್ಯ ಕಾಮಗಾರಿಗಳನ್ನು ಒಟ್ಟಾರೆ ಅನುದಾನದ ಅರ್ಹತೆಗಾಗಿ ಪರಿಗಣಿಸಬಹುದಾದರೂ, ಕೇಂದ್ರದ ನಿಜವಾದ ಧನಸಹಾಯವನ್ನು ಕೇವಲ ಪಾರ್ಕ್‌ನ ಒಳಗಿನ ಆಂತರಿಕ ಮೂಲಸೌಕರ್ಯಗಳಾದ ರಸ್ತೆ, ನೀರು, ವಿದ್ಯುತ್, ತ್ಯಾಜ್ಯ ನೀರು ಸಂಸ್ಕರಣಾ ಘಟಕ (CETP) ಮತ್ತು ವಸತಿ ನಿಲಯಗಳಿಗಾಗಿ ಬಳಸಲಾಗುವುದು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ಸಫಾಯಿ ಕರ್ಮಚಾರಿಗಳಿಗೆ ಬದುಕು ಕಲ್ಪಿಸುವೆಡೆ ಸರ್ಕಾರದ ಐತಿಹಾಸಿಕ ನಿರ್ಧಾರ: ಹೆಚ್ ಸಿ.ಮಹದೇವಪ್ಪ
Next: ಬೆಂಗಳೂರಿನಿಂದ 2 ಜಿಲ್ಲೆಗಳಿಗೆ ವಿಮಾನ ಸೇವೆ ಆರಂಭ: ಎಂ ಬಿ ಪಾಟೀಲ

Views:

20

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.