ರಾಮನಗರ: ನಿಖಿಲ್ ಕುಮಾರಸ್ವಾಮಿ ಅವರ ವಯಸ್ಸಿಗೆ ತಕ್ಕಂತೆ ಮಾತನಾಡಬೇಕು. ವಯಸ್ಸಿಗಿಂತ ಮೀರಿ ಮಾತನಾಡಿದರೆ ಅದು ಒಳ್ಳೆಯದಲ್ಲ ಹಾಗಾಗಿ ಎಷ್ಟು ಬೇಕು ಅಷ್ಟು ಮಾತ್ರ ಮಾತನಾಡಿದರೆ ಒಳಿತು. ನಿಖಿಲ್ ಕುಮಾರಸ್ವಾಮಿಗೆ ಇನ್ನೂ ರಾಜಕೀಯ ಅನುಭವ ಇಲ್ಲ ಎಂದು ರಾಮನಗರದ ಶಾಸಕ ಇಕ್ಬಾಲ್ ಹುಸೇನ್ ಅವರು ನಿಖಿಲ್ ಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಹಾರೋಹಳ್ಳಿಯಲ್ಲಿ ಇಂದು (ಶನಿವಾರ ಮೇ 23) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಿಖಿಲ್‌ಗೆ ಇನ್ನು ರಾಜಕೀಯ ಅನುಭವ ಕಡಿಮೆ. ಯಾವ ನೈತಿಕತೆ ಇಟ್ಟುಕೊಂಡು ನಿಖಿಲ್ ಮಾತನಾಡುತ್ತಾರೋ ಗೊತ್ತಿಲ್ಲ. ಡಿಕೆಶಿ ಹಾಗೂ ಕುಮಾರಸ್ವಾಮಿ ಒಂದೇ ವಯಸ್ಸಿನವರು. ರಾಜಕೀಯವಾಗಿ ಅವರು ಮಾತನಾಡುತ್ತಾರೆ. ರಾಜಕಾರಣ ಬರುತ್ತೆ, ಹೋಗುತ್ತೆ. ಆದರೆ ಮಾತಿನ ಮೇಲೆ ನಿಗಾ ಇಟ್ಟು ಮಾತನಾಡಬೇಕು ಎಂದು ಕಿಡಿಕಾರಿದರು. ಇದನ್ನೂ ಓದಿ: ಉದ್ಯೋಗ ಮೇಳ; 50 ಸಾವಿರಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಣೆ
ಮಾತಿನ ಮೇಲೆ ನಿಗಾ ಇರದಿದ್ದರೆ ಒಂದು ಹೋಗಿ ಇನ್ನೊಂದು ಆಗುವ ಸಂದರ್ಭ ಒದಗಿಬರುತ್ತದೆ. ಹಾಗಾಗಿ ನಿಖಿಲ್ ಕುಮಾರಸ್ವಾಮಿ ಅವರು ತಮ್ಮ ಮಾತಿನ ಮೇಲೆ ನಿಗಾ ಇಟ್ಟು ಮಾತನಾಡಿದರೆ ರಾಜಕೀಯದಲ್ಲಿ ಅವರಿಗೆ ಭವಿಷ್ಯ ಇದೆ ಎಂದು ಹೇಳಿದ್ದಾರೆ.
