ಬೆಂಗಳೂರು: ಕರ್ನಾಟಕ ರಾಜ್ಯವು ಯಾವ ರಾಜ್ಯಗಳಿಗೂ ಕಮ್ಮಿ ಇಲ್ಲ ಎಂಬ ಉದಾಹರಣೆ ಇದೀಗ ಮತ್ತೊಮ್ಮೆ ಸಾಬೀತಾಗಿದೆ.
ಹೌದು, ರಾಜ್ಯದಲ್ಲಿ ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಇಂದು (ಶನಿವಾರ ಮೇ 23) ಅಧಿಕೃತವಾಗಿ ಶಂಕು ಸ್ಥಾಪನೆ ಮಾಡಲಾಗಿದ್ದು ಇದು ಕರ್ನಾಟಕ ರಾಜ್ಯದ ಕೀರ್ತಿಯನ್ನು ಇನ್ನಷ್ಟು ಹೆಚ್ಚಿಸಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಸೇರಿದಂತೆ ಹಲವು ಸಚಿವರು, ಶಾಸಕರು ಸೇರಿ ಕೆ.ಹೆಚ್.ಬಿ ಸೂರ್ಯ ಕ್ರೀಡಾ ಗ್ರಾಮದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಹಾಗೂ ‘ಸೂರ್ಯ ಶೈನ್’ ಮತ್ತು ‘ಸೂರ್ಯ ಡಿವೈನ್’ ವಸತಿ ಸಮುಚ್ಚಯ ಕಾಮಗಾರಿಗಳಿಗೆ ಇಂದು ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದು ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಅವರು ಹೇಳಿದರು.
ಅಲ್ಲದೇ ಇದೇ ಸಂದರ್ಭದಲ್ಲಿ ವಸತಿ ಯೋಜನೆಗೆ ಭೂಮಿ ನೀಡಿದ ಭೂಮಾಲೀಕರಿಗೆ ಸಾಂಕೇತಿಕವಾಗಿ ಹಾಗೂ ಸಾರ್ವಜನಿಕ ಅರ್ಜಿದಾರರಿಗೆ ಲಾಟರಿ ಮುಖಾಂತರ ನಿವೇಶನಗಳನ್ನು ಹಂಚಿಕೆ ಮಾಡಲಾಯಿತು ಎಂದು ತಿಳಿಸಿದರು. ಇದನ್ನೂ ಓದಿ: ಕೈಯಲ್ಲಿ ಬ್ಯಾಟ್ ಹಿಡಿದು ಅಂತರಾಷ್ಟ್ರೀಯ ಕ್ರೀಡಾಂಗಣಕ್ಕೆ ಚಾಲನೆ ನೀಡಿದ ಸಿಎಂ
ಈ ಸಂರ್ಭದಲ್ಲಿ ಸಚಿವರಾದ ಬಿ.ಝೆಡ್. ಜಮೀರ್ ಅಹ್ಮದ್ ಖಾನ್, ಶಾಸಕರಾದ ಕೆ.ಎಂ. ಶಿವಲಿಂಗೇಗೌಡ, ಬಿ. ಶಿವಣ್ಣ, ಎಂ. ಕೃಷ್ಣಪ್ಪ, ಮಾಜಿ ಸಂಸದರು ಹಾಗೂ ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
