ಶಿವಮೊಗ್ಗ: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಇಷ್ಟು ದಿನ ಅತಿಥಿ ಶಿಕ್ಷಕರಾಗಿ ಕಾರ್ಯನಿರ್ವಹಿಸಿದ ಶಿಕ್ಷಕರಿಗೆ ಇದೀಗ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಒಂದುದು ಹೊರಬಿದ್ದಿದ್ದು ಜೂನ್ ತಿಂಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಹೇಳಲಾಗುತ್ತಿದೆ.
ಹೌದು, ರಾಜ್ಯದ ಶಿಕ್ಷಣ ಇಲಾಖೆಯಲ್ಲಿ ಹಲವಾರು ಶಿಕ್ಷಕರ ಹುದ್ದೆಗಳು ಖಾಲಿಯಿದ್ದು, ಈ ಬಾರಿ ಜೂನ್ ಆರಂಭದಲ್ಲಿಯೇ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಈ ಕುರಿತು ಇಂದು ಶನಿವಾರ ಮೇ 23ರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ 19 ಸೇರಿದಂತೆ ರಾಜ್ಯದಲ್ಲಿ 1,000 ಕೆಪಿಎಸ್ ಶಾಲೆಗಳ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಪ್ರತೀ ಶಾಲೆಗೆ ಕನಿಷ್ಠ 3.5 ಕೋಟಿ ರೂಪಾಯಿ ವ್ಯಯಿಸಲಾಗುತ್ತಿದೆ. ಇದನ್ನೂ ಓದಿ: ಬಿಜೆಪಿಯವರಿಗೆ ಅದು ಹಿಜಾಬ್, ನಮಗೆ ಸಮಾನತೆ ಸಂಕೇತ: ಮಧು ಬಂಗಾರಪ್ಪ
ಕರ್ನಾಟಕ ಪಬ್ಲಿಕ್ ಶಾಲೆಗಳ ಪರಿಕಲ್ಪನೆ ಈಗ ದೇಶದಲ್ಲಿಯೇ ಮಾದರಿ ಆಗಿದ್ದು, ಇದೇ ಮಾದರಿ ಅಳವಡಿಸಿಕೊಂಡು ತೆಲಂಗಾಣ ಸರ್ಕಾರ ಟಿಪಿಎಸ್ ಆರಂಭಿಸಲು ಮುಂದಾಗಿದೆ. ಆ ರಾಜ್ಯದ ಶಿಕ್ಷಣ ಇಲಾಖೆ ಅಧಿಕಾರಿಗಳು ಬೆಂಗಳೂರಿಗೆ ಬಂದು ಕೆಪಿಎಸ್ ಬಗ್ಗೆ ಅಧ್ಯಯನ ನಡೆಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.
