ಮೈಸೂರು: ನಾಡ ದೇವತೆ ಹಾಗೂ ಶಕ್ತಿ ದೇವತೆಯಾದ ಮೈಸೂರು ಚಾಮುಂಡೇಶ್ವರಿ ತಾಯಿ ದರ್ಶನ ಪಡೆಯಲು ದೇಶ ಮಾತ್ರವಲ್ಲದೆ ವಿದೇಶದಿಂದಲೂ ಬಂದು ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಧನ್ಯರಾಗುತ್ತಾರೆ.
ಹೌದು, ಮೈಸೂರಿನ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಇದೀಗ ಬಾಲಿವುಡ್ ನಟ ರಣವೀರ್ ಸಿಂಗ್ ಅವರು ಇಂದು (ಮಂಗಳವಾರ 26) ಮೈಸೂರಿನಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ವಿದೇಶಿ ಮಾರುಕಟ್ಟೆಯಲ್ಲೂ ‘ದೃಶ್ಯಂ 3’ ಸುನಾಮಿ
ಚಾಮುಂಡಿ ತಾಯಿ ಎದುರು ಕುಳಿತು ತಲೆಬಾಗಿ ನಮಸ್ಕರಿಸಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
