Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಶೀಘ್ರದಲ್ಲಿ ಡಾ. ರಾಜ್‌ಕುಮಾರ್ ರಸ್ತೆ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣ: ಮಹೇಶ್ವರ್ ರಾವ್
  • Bangalore
  • State

ಶೀಘ್ರದಲ್ಲಿ ಡಾ. ರಾಜ್‌ಕುಮಾರ್ ರಸ್ತೆ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣ: ಮಹೇಶ್ವರ್ ರಾವ್

Praja Vahini May 26, 2026
WhatsApp Image 2026-05-26 at 16.38.24
Spread the love

ಬೆಂಗಳೂರು: ಓಕಳೀಪುರಂ ಅಷ್ಟಪಥ ಕಾರಿಡಾರ್‌ನ ಚೆನ್ನೈ ರೈಲ್ವೆ ಕೆಳಭಾಗದಲ್ಲಿ ಬಾಕಿ ಇರುವ ಕಾಮಗಾರಿಗಳನ್ನು 25 ದಿನಗಳಲ್ಲಿ ಪೂರ್ಣಗೊಳಿಸುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರು ಕೇಂದ್ರ ನಗರ ಪಾಲಿಕೆ ಹಾಗೂ ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಚೆನ್ನೈ ರೈಲ್ವೆ ಹಳಿ ಕೆಳಭಾಗದಲ್ಲಿ ರೈಲ್ವೆ ಇಲಾಖೆ ವತಿಯಿಂದ ಈಗಾಗಲೇ 2 ಬಾಕ್ಸ್ ಪುಶಿಂಗ್ ಕಾರ್ಯಗಳು ಪೂರ್ಣಗೊಂಡಿವೆ. ಈ ಸಂಬಂಧ, ಮೆಜೆಸ್ಟಿಕ್‌ನಿಂದ ರಾಜಾಜಿನಗರದ ಕಡೆಗೆ ತೆರಳುವ ಮಾರ್ಗದ ಒಂದು ಬಾಕ್ಸ್ ಭಾಗದಲ್ಲಿ ವಾಹನಗಳ ಸಂಚಾರಕ್ಕಾಗಿ ಸಂಪರ್ಕ ರಸ್ತೆ ನಿರ್ಮಾಣ ಕಾರ್ಯವನ್ನು 25 ದಿನಗಳಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅದೇ ಸ್ಥಳದಲ್ಲಿ ರೈಲ್ವೆ ನಿಲ್ದಾಣದ ಕಡೆಗೆ ತೆರಳುವ ಬಾಕ್ಸ್ ಮಾರ್ಗದ ಸಂಪರ್ಕ ರಸ್ತೆ ನಿರ್ಮಾಣ, ಮಳೆನೀರು ಹರಿದು ಹೋಗಲು 1200 ಮಿ.ಮೀ. ವ್ಯಾಸದ ನೀರುಗಾಲುವೆ ನಿರ್ಮಾಣ, ಸುಮಾರು 63 ಮೀಟರ್ ಉದ್ದದ ರಿಟೈನಿಂಗ್ ವಾಲ್ ಹಾಗೂ ಪಾದಚಾರಿ ಮಾರ್ಗದ ಕಾಮಗಾರಿಗಳನ್ನು ಕೂಡಲೇ ಆರಂಭಿಸಿ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇದೇ ಸ್ಥಳದಲ್ಲಿ ಹೊಸ ಪಾದಚಾರಿ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನೂ ಕೈಗೆತ್ತಿಕೊಳ್ಳಬೇಕಿದ್ದು, ಶೀಘ್ರವಾಗಿ ಕಾಮಗಾರಿ ಆರಂಭಿಸಿ ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ಮಾಧವನಗರ ರೈಲ್ವೆ ಕೆಳಸೇತುವೆ ಪರಿಶೀಲನೆ

ಶಿವಾನಂದ ವೃತ್ತದ ಸಮೀಪದ ಮಾದವನಗರ ರೈಲ್ವೆ ಕೆಳಸೇತುವೆ ಬಳಿ ಪರಿಶೀಲನೆ ನಡೆಸಿದ ವೇಳೆ, ಮಳೆನೀರು ಹರಿವಿಗಾಗಿ ಅಳವಡಿಸಲಾಗಿರುವ ಗ್ರೇಟಿಂಗ್‌ಗಳನ್ನು ಸದಾ ಸ್ವಚ್ಛವಾಗಿರಿಸುವಂತೆ ಸೂಚಿಸಿದರು. ಜೊತೆಗೆ, ಗ್ರೇಟಿಂಗ್‌ಗಳ ಕೆಳಭಾಗ ಹಾಗೂ ಸುತ್ತಮುತ್ತಲಿನ ಚರಂಡಿಗಳಲ್ಲಿ ಹೂಳೆತ್ತುವ ಕಾರ್ಯವನ್ನು ಕೈಗೊಂಡು ನೀರು ಸರಾಗವಾಗಿ ಹರಿದು ಹೋಗುವ ವ್ಯವಸ್ಥೆ ಮಾಡಬೇಕು. ಮಳೆಗಾಲದಲ್ಲಿ ರೈಲ್ವೆ ಕೆಳಸೇತುವೆ ಬಳಿ ನೀರು ನಿಲ್ಲದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಸಿಎಂ, ಡಿಸಿಎಂ ದೆಹಲಿ ಪ್ರಯಾಣ; ಶಾಸಕ ಬಾಲಕೃಷ್ಣ ಹೇಳಿದ್ದೇನು?

ಪರಿಶೀಲನೆ ವೇಳೆ ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ರಾಜೇಂದ್ರ ಚೋಳನ್ ಹಾಗೂ ಪಶ್ಚಿಮ ನಗರ ಪಾಲಿಕೆಯ ಆಯುಕ್ತರಾದ ಡಾ: ರಾಜೇಂದ್ರ ಕೆ.ವಿ., ಬೆಂ.ಘ.ತ್ಯಾ.ನಿ. ನಿಯಮಿತದ ಸಿಇಒ ಕರೀಗೌಡ, ಅಭಿವೃದ್ಧಿ ಅಪರ ಆಯುಕ್ತರಾದ ವೆಂಕಟ ಚಲಪತಿ, ಮುಖ್ಯ ಅಭಿಯಂತರರಾದ ವಿಜಯ್ ಕುಮಾರ್ ಹರಿದಾಸ್, ಬಸವರಾಜ್ ಕಬಾಡೆ, ಮಾದೇಶ್, ಅಧೀಕ್ಷಕ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು, ರೈಲ್ವೆ ಅಧಿಕಾರಿಗಳು ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಸಿಎಂ, ಡಿಸಿಎಂ ದೆಹಲಿ ಪ್ರಯಾಣ; ಶಾಸಕ ಬಾಲಕೃಷ್ಣ ಹೇಳಿದ್ದೇನು?
Next: ಮೇಕೆದಾಟು: ತಮಿಳುನಾಡಿನ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟಿ

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.