ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬ್ರೇಕ್ ಫಾಸ್ಟ್ ಮೀಟಿಂಗ್ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಪ್ಪುಗೆ ವಿದಾಯ ಹೇಳಿದ್ದಾರೆ.
ಹೌದು, ರಾಜ್ಯ ರಾಜಕೀಯದಲ್ಲಿ ಹಲವು ದಿನಗಳಿಂದ ಬಾರಿ ಚರ್ಚೆಗೆ ಕಾರಣವಾಗಿದ್ದ ಸಿಎಂ ಕುರ್ಚಿ ಕದನಕ್ಕೆ ಇಂದು ಅಂತಿಮವಾಗಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಿಎಂ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ.
ಸಿಎಂ ವಿದಾಯದ ಬ್ರೇಕ್ಫಾಸ್ಟ್ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಪರಸ್ಪರ ಅಪ್ಪಿಕೊಂಡ ಮತ್ತು ಡಿಕೆಶಿ ಸಿಎಂ ಸಿದ್ದರಾಮಯ್ಯರ ಕಾಲಿಗೆ ಬಿದ್ದು ಆಶೀರ್ವಾದ ತೆಗೆದುಕೊಳ್ಳುತ್ತಿರುವ ಫೋಟೋಗಳನ್ನು ಕರ್ನಾಟಕ ಕಾಂಗ್ರೆಸ್ ಎಕ್ಸ್ನಲ್ಲಿ ಹಂಚಿಕೊಂಡಿದೆ.
ಸಿಎಂ-ಡಿಸಿಎಂ ಫೋಟೋಗಳನ್ನು ಹಂಚಿಕೊಂಡ ಕಾಂಗ್ರೆಸ್, ಅಂದು ಇಂದು ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ. ಸಾರ್ವಜನಿಕರ ಸೇವೆಯೇ ನಮ್ಮ ಗುರಿ ಎಂದು ಟ್ವೀಟ್ ಮಾಡಿದೆ.
ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ವಿದಾಯದ ಬ್ರೇಕ್ಫಾಸ್ಟ್ನಲ್ಲಿ ನುಡಿದಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಹೇಳುವುವುದನ್ನು ಪಾಲನೆ ಮಾಡುವುದು ನನ್ನ ಕರ್ತವ್ಯ ಎಂದು ನುಡಿದಿದ್ದಾರೆ. ಈ ಹಿಂದೆ ನಡೆದ ಒಪ್ಪಂದ ಸೂತ್ರ ಬಿಚ್ಚಿಟ್ಟ ಸಿದ್ದರಾಮಯ್ಯ ಸಂಪುಟ ಸಹೋದ್ಯೋಗಿಗಳ ಮುಂದೆ ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದರು. ಇದನ್ನೂ ಓದಿ: ಸಿಎಂ ಸ್ಥಾನಕ್ಕೆ ಸಿದ್ದು ರಾಜೀನಾಮೆ
ಸಿದ್ದರಾಮಯ್ಯನವರು ಈ ರೀತಿ ಹೇಳುತ್ತಿದ್ದಂತೆ ಡಿಕೆ ಶಿವಕುಮಾರ್ ಕಣ್ಣಂಚಲಿ ನೀರು ಬಂದಿದೆ. ಸಿಎಂ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಕ್ಕೆ ಡಿಕೆಶಿ ಭಾವುಕರಾದರು ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
ಬೆಳಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.
