ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕೊನೆಗೂ ಸಿಎಂ ಕುರ್ಚಿ ಗುದ್ದಾಟಕ್ಕೆ ತೆರೆ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಧಿಕೃತವಾಗಿ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮುಂದಿನ ಮುಖ್ಯಮಂತ್ರಿ ಆಗಿ ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಲಿದ್ದಾರೆ ಎಂಬ ಮಾಹಿತಿ ಇದೀಗ ರಾಜ್ಯ ರಾಜಕೀಯದಲ್ಲಿ ಜೋರಾಗಿ ಕೇಳುತ್ತಿದೆ.
ಹೌದು, ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಲು ಎಲ್ಲ ಸಿದ್ಧತೆ ನಡೆಸಲಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಇದೀಗ ಪ್ರಮಾಣವಚನ ಸ್ವೀಕರಿಸುವಲು ಸಮಯ ನಿಗದಿಗೆ ಡಿ ಕೆ ಶಿವಕುಮಾರ್ ಅವರು ಜ್ಯೋತಿಷ್ಯರಾದ ದ್ವಾರಕನಾಥ್ ಅವರಿಗೆ ದೂರವಾಣಿ ಕರೆ ಮಾಡಿ ಪ್ರಮಾಣವಚನ ಸ್ವೀಕರಣೆಗೆ ಒಳ್ಳೆ ಮುಹೂರ್ತ ನಿಗದಿ ಮಾಡುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ರಾಷ್ಟ್ರ ರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ: ಸಿದ್ದರಾಮಯ್ಯ
ಅಲ್ಲದೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಸಂಜೆ ದೆಹಲಿಯತ್ತ ಪ್ರಯಾಣ ಬೆಳೆಸುತ್ತಿದ್ದು, ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ಸಿಎಲ್ಪಿ ಸಭೆ, ಹೊಸ ಸಚಿವ ಸಂಪುಟ ಹಾಗೂ ಡಿಸಿಎಂ ಆಯ್ಕೆ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
