ದೆಹಲಿ: ಸಿದ್ದರಾಮಯ್ಯ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ರಾಜ್ಯ ರಾಜಕಾರಣದಲ್ಲಿ ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂಬ ಕೂಗು ಈಗಾಗಲೇ ರಾಜ್ಯ ವಲಯದಲ್ಲಿ ಭಾರಿ ಜೋರಾಗಿ ಕೇಳುತ್ತಿದೆ.
ಹೌದು, ಕಾಂಗ್ರೆಸ್ ಪಕ್ಷದ ಪ್ರಬಲ ನಾಯಕರಾಗಿ ಹೊರಹೊಮ್ಮಿದ ಡಿಕೆ ಶಿವಕುಮಾರ್ ಅವರು ಮುಂದಿನ ಸಿಎಂ ಎಂಬ ಕೂಗು ಈಗಾಗಲೇ ರಾಜ್ಯ ರಾಜಕೀಯದಲ್ಲಿ ಜೋರಾಗಿ ಕೇಳಿತ್ತಿರುವಾಗ ಮೂರು ದಿನಗಳ ನಂತರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇದೆ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ದೆಹಲಿಯಲ್ಲಿ ಇಂದು (ಶುಕ್ರವಾರ ಮೇ 29) ಕಾಂಗ್ರೆಸ್ ಹಾ ಹೈಕಮಾಂಡ್ ಭೇಟಿ ಮಾಡಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಾಳೆ ಸಂಜೆ (ಶನಿವಾರ ಮೇ 30) ರಂದು ಶಾಸಕಾಂಗ ಪಕ್ಷದ ಸಭೆ ನಡೆಸಲಿದ್ದು ಎಲ್ಲ ಶಾಸಕರಿಗೂ ಬೆಂಗಳೂರಿನಲ್ಲಿ ಇರಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.ಹೈಕಮಾಂಡ್ ನಾಯಕರ ಸೂಚನೆಯ ಮೇರೆಗೆ ಈ ಸಭೆಯ ಸಮಯವನ್ನು ನಿರ್ಧರಿಸಲಾಗುವುದು ಎಂದು ತಿಳಿಸಿದರು.
ಇಂದು ಡಿಕೆ ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಸರ್ಕಾರ ರಚನೆಯ ಬಗ್ಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಖರ್ಗೆಯವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡರು.
