ಐಪಿಎಲ್ ಇತಿಹಾಸದಲ್ಲಿ ಆರ್‌ಸಿಬಿ ತಂಡವು ಮಹತ್ವದ ಕಲೆಯನ್ನು ಮಾಡಿದ್ದು ಇದೀಗ ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಪ್ ಮೇಲೆ ಕಪ್ ಗೆದ್ದಿದೆ. ಎಲ್ಲರ ನಿರೀಕ್ಷೆಯಂತೆ 2026ರ ಐಪಿಎಲ್‌ನಲ್ಲೂ ಚಾಂಪಿಯನ್ ಆಗಿದೆ ಹೊರಹೊಮ್ಮಿದೆ. ಭಾನುವಾರ ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ 5 ವಿಕೆಟ್‌ಗಳ ಅಮೋಘ ಗೆಲುವು ಸಾಧಿಸಿ, ಹಾಲಿ ಚಾಂಪಿಯನ್ ಪಟ್ಟ ಉಳಿಸಿಕೊಂಡಿತು.
ಬೌಲರ್‌ಗಳ ಶಿಸ್ತುಬದ್ಧ ಮಾರಕ ದಾಳಿ ಹಾಗೂ ರನ್ ಮಷಿನ್ ವಿರಾಟ್ ಕೊಹ್ಲಿ ಅವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇತಿಹಾಸ ನಿರ್ಮಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಧೂಳೀಪಟ ಮಾಡಿದ ಆರ್‌ಸಿಬಿ ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಂತರ ಸತತ ಎರಡು ಬಾರಿ ಟ್ರೋಫಿ ಗೆದ್ದ ಮೂರನೇ ತಂಡ ಎಂಬ ಅಪ್ರತಿಮ ಕೀರ್ತಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭಾಜನವಾಗಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ ಆರ್‌ಸಿಬಿ ಬೌಲರ್‌ಗಳ ಶಿಸ್ತುಬದ್ಧ ದಾಳಿಗೆ ನಲುಗಿ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 155 ರನ್‌ಗಳ ಸಾಧಾರಣ ಮೊತ್ತ ಕಲೆ ಹಾಕಿತು. ಈ ಮೊತ್ತವನ್ನು ಬೆನ್ನಟ್ಟಿದ ಆರ್‌ಸಿಬಿ ಇನ್ನು 12 ಎಸೆತ ಬಾಕಿ ಇರುವಂತೆಯೇ 5 ವಿಕೆಟ್ ನಷ್ಟಕ್ಕೆ 161 ರನ್ ಹೊಡೆದು ಜಯಗಳಿಸಿತು.
ಆರ್‌ಸಿಬಿಯ ಈ ಐತಿಹಾಸಿಕ ಕಪ್ ಗೆಲುವಿನಲ್ಲಿ ರನ್ ಮಷಿನ್ ವಿರಾಟ್ ಕೊಹ್ಲಿ ಮತ್ತೊಮ್ಮೆ ಅತ್ಯಂತ ನಿರ್ಣಾಯಕ ಪಾತ್ರ ವಹಿಸಿದರು.
ಇನ್ನುಆರ್‌ಸಿಬಿ ತಂಡ ಗೆಲ್ಲುತ್ತಿದ್ದಂತೆಯೇ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್ ಕಪ್ ದೀಪಾಲಂಕಾರದಲ್ಲಿ ಆಕಾಶದಲ್ಲಿ ಕಂಗೊಳಿಸಿತು ಇದನ್ನು ನೋಡಿದ ಅಭಿಮಾನಿಗಳು ಹುಚ್ಚೆದ್ದು ಕುಣಿದರು.
ಇನ್ನು ಈ ಬಾರಿಯೂ ವಿರಾಟ್ ಕೊಹ್ಲಿ ಅದ್ಭುತ ಇತಿಹಾಸ ಸೃಷ್ಟಿಸಿದ್ದು ಕಿಂಗ್ ಕೋಹಿಲಿ ಅವರ ಪತ್ನಿ ಅನುಷ್ಕಾ ಜೊತೆ ಕ್ರೀಡಾಂಗಣದಲ್ಲಿಯೇ ಅನುಷ್ಕಾರನ್ನ ತಬ್ಬಿಕೊಂಡು ಸಖತ್ ಸ್ಟೆಪ್ ಹಾಕಿದ್ದಾರೆ.
ಅಲ್ಲದೆ ಆರ್‌ಸಿಬಿ ತಂಡದ ನಾಯಕರು ತಮಟೆ ಸಂಡಿಗೆ ಆರ್‌ಸಿಬಿ ಕಪ್ ಹಿಡಿದು ಸಖತ್ ಸ್ಟೆಪ್ ಹಾಕಿದ್ದಾರೆ..
ಇನ್ನು ಆರ್‌ಸಿಬಿ ಅಭಿಮಾನಿಗಳು ಇಡೀ ದೇಶದಾದ್ಯಂತ ಸಂಭ್ರಮಾಚರಣೆಯಲ್ಲಿ ಮೊಳಗಿದ್ದು, ಇಡೀ ದೇಶದಾದ್ಯಂತ ಆರ್ಸಿಬಿ ಅಭಿಮಾನಿಗಳು ಪಟಾಕಿ ಸೇರಿಸಿ ಸಂಭ್ರಮ ಆಚರಣೆ ಮಾಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ರಾಯಲ್ ಚಾಲೆಂಜರ್ಸ್ ಅಭಿಮಾನಿಗಳು ಪಟಾಕಿ ಬಿಸಿಬಿಸಿ ಡೊಳ್ಳು ಬಡೆದು ಸಕ್ಕತ್ ಸ್ಟೆಪ್ ಹಾಕುವ ಮೂಲಕ ಸಂಭ್ರಮ ಆಚರಣೆ ಮಾಡಿದ್ದಾರೆ.
