ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಒಬ್ಬ ಸಣ್ಣ ಕಾರ್ಯಕರ್ತನಾಗಿ ರಾಜಕೀಯ ಜೀವನ ಆರಂಭಿಸಿದ ಡಿಕೆ ಶಿವಕುಮಾರ್ ಇಂದು ರಾಜ್ಯದ ಮುಖ್ಯಮಂತ್ರಿಯಾಗಿ ಅದ್ದೂರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಹೌದು, ಡಿಕೆ ಶಿವಕುಮಾರ್ ಅವರ ರಾಜಕೀಯ ಭವಿಷ್ಯದಲ್ಲಿ ಈಗಾಗಲೇ ಹಲವಾರು ಕಷ್ಟ, ನಷ್ಟಗಳನ್ನು ಅನುಭವಿಸಿರುವ ಅವರು ಕಾಂಗ್ರೆಸ್ ಪಕ್ಷದಲ್ಲಿ ಒಬ್ಬ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿದ ಅವರು ಈಗ ರಾಜದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಇನ್ನು ಡಿಕೆಶಿ ಅವರ ಪ್ರಮಾಣವಚನ ಸ್ವೀಕಾರವನ್ನು ಲೋಕಭವನದಲ್ಲಿ ನೆರವೇರಿಸಲಾಗುತ್ತಿದ್ದು, ಪ್ರಮಾಣವಚನ ಸ್ವೀಕರಿಸಲು ವಿವಿದ ರೀತಿಯ ತಯಾರಿಗಳನ್ನು ನಡೆಸಲಾಗುತ್ತಿದೆ. ಲೋಕಭವನದ ಗಾಜಿನಮನೆಯಲ್ಲಿ ಪದಗ್ರಹಣ ಸಮಾರಂಭ ಸಂಜೆ 4.05ಕ್ಕೆ ನೆರವೇರಲಿದ್ದು, ಕಾರ್ಯಕ್ರಮದ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿವೆ. ನಾಳೆಯ ಸಿಎಂ ಪದಗ್ರಹಣ ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು, ಸಿನಿಮಾ ತಾರೆಯರು, ಶಾಸಕರು, ಮಾಜಿ ಸಚಿವರು ಸೇರಿ ಗಣ್ಯರು ಭಾಗಿಯಾಗಲಿದ್ದು, ಕಾರ್ಯಕ್ರಮಕ್ಕೆ ಬರುವರಿಗೆ 3 ರೀತಿ ಪಾಸ್ ನೀಡಲು ಸಿದ್ಧತೆ ನಡೆದಿದೆ ಎನ್ನಲಾಗಿದೆ.
ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಪ್ರಮುಖ ನಾಯಕರ ಕುಟುಂಬಗಳು, ಬೆಂಬಲಿಗರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಇರಲಿದೆ. ಅತಿ ಗಣ್ಯರು, ಗಣ್ಯರು ಹಾಗೂ ಸಾಮಾನ್ಯರಿಗೆ ಪ್ರತ್ಯೇಕ ಪಾಸ್ ವ್ಯವಸ್ಥೆ ಇರಲಿದ್ದು, ಮಧ್ಯಾಹ್ನ 2 ಗಂಟೆ ಒಳಗಾಗಿ ಲೋಕಭವನಕ್ಕೆ ಬರುವಂತೆ ಸೂಚನೆ ನೀಡಲಾಗಿದೆ. ಯಾವುದೇ ಆಡಂಭರವಿಲ್ಲದೆ ಸರಳವಾಗಿ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಇದನ್ನೂ ಓದಿ: ರಾಜ್ಯದಲ್ಲಿ ಡಿಕೆಶಿ ಸಂಪುಟದಲ್ಲಿ ಯಾರಿಗೆ ಸಿಗುತ್ತೆ ಮಂತ್ರಿ ಪಟ್ಟ?
ಅಲ್ಲದೆ ಡಿಕೆ ಶಿವಕುಮಾರ್ ಅವರ ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ಯಾವುದೇ ರೀತಿ ಅಹಿತಕರ ಘಟನೆ ನಡೆದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪೊಲೀಸ್ ಅಧಿಕಾರಿಗಳ ಸಭೆ ಕರೆದಿದ್ದಾರೆ. ಎಲ್ಲಾ ವಿಭಾಗದ ಜಂಟಿ ಪೊಲೀಸ್ ಅಯುಕ್ತರು, ಡಿಸಿಪಿಗಳು, ಸಂಚಾರ ವಿಭಾಗದ ಡಿಸಿಪಿಗಳ ಜೊತೆ ಇಂದು (ಮಂಗಳವಾರ ಜೂ 02) ಪೊಲೀಸ್ ಕಮಿಷನರ್ ಮಧ್ಯಾಹ್ನ 3 ಗಂಟೆಗೆ ಸಭೆ ನಡೆಸಲಿದ್ದು, ಬಂದೋಬಸ್ತ್ ಬಗ್ಗೆ ಸಲಹೆ, ಸೂಚನೆ ನೀಡಲಿದ್ದಾರೆ.
