ಲಕ್ನೋ: ಈ ಬಾರಿ ಐಪಿಎಲ್ ಆರಂಭ ಆದಾಗಿನಿಂದಲೂ ಆರ್ಸಿಬಿ ತಂಡವು ಭರ್ಜರಿ ಪ್ರದರ್ಶನ ಕಾಣುವುದರ ಜೊತೆಗೆ ಇದೀಗ 2ನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಹೌದು, ಐಪಿಎಲ್ 2026ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಜಯಸಾಧಿಸಿರುವ ಹಿನ್ನೆಲೆಯಲ್ಲಿ ವಿರಾಟ್ ಕೊಹ್ಲಿ ಅವರ ಧರ್ಮಪತ್ನಿ ಅನುಷ್ಕಾ ಶರ್ಮಾ ಅವರ ಜೊತೆ ಬೃಂದಾವನಕ್ಕೆ ಭೇಟಿ ನೀಡಿದ್ದಾರೆ.
ನಿನ್ನೆ (ಸೋಮವಾರ ಜೂ.1) ರಂದು ವೃಂದಾವನದಲ್ಲಿರುವ ಪ್ರಸಿದ್ಧ ಆಧ್ಯಾತ್ಮಿಕ ಗುರು ಪ್ರೇಮಾನಂದ್ ಮಹಾರಾಜರ `ರಾಧಾ ಕೇಳಿ ಕುಂಜ್’ ಆಶ್ರಮಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಮಹಾರಾಜರ ದರ್ಶನ ಪಡೆದು ಆಶೀರ್ವಾದ ಪಡೆದುಕೊಂಡಿದ್ದಾರೆ. ಸದ್ಯ ಕೊಹ್ಲಿ ಮತ್ತು ಅನುಷ್ಕಾ ಆಶ್ರಮದಿಂದ ಹೊರಬರುತ್ತಿರುವ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇದನ್ನೂ ಓದಿ: ಗುಜರಾತ್ ಟೈಟಾನ್ಸ್ ಬಗ್ಗುಬಡಿದ ಆರ್ಸಿಬಿ; ಸತತ 2ನೇ ಬಾರಿಗೆ ಚಾಂಪಿಯನ್ ಪಟ್ಟ
ಆಟದ ಮೈದಾನದಲ್ಲಿ ಅಬ್ಬರಿಸಿದ ಕೊಹ್ಲಿ, ವೃಂದಾವನ ಆಶ್ರಮದಲ್ಲಿ ವಿನಮ್ರರಾಗಿ ಕೈಮುಗಿದು ನಿಂತಿರುವುದು ಅಭಿಮಾನಿಗಳ ಗಮನ ಸೆಳೆದಿದೆ.
