ದೆಹಲಿ: ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಬಾರಿ ಸಂಚಲನ ಸೃಷ್ಟಿಸುವಂತೆ ಮಹತ್ವದ ಬೆಳವಣಿಗೆ ಒಂದು ನಡೆದು ಹೋಗಿದೆ.
ಹೌದು, ಖಡಕ್ ಐಪಿಎಸ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ ಅಣ್ಣಾಮಲೈಯವರು ತಮ್ಮ ಸರಕಾರಿ ಕೆಲಸಕ್ಕೆ ರಾಜೀನಾಮೆ ನೀಡಿ 2020ರಲ್ಲಿ ಅಧಿಕೃತವಾಗಿ ಬಿಜೆಪಿ ಪಕ್ಷ ಸೇರುವ ಮೂಲಕ ರಾಜಕೀಯ ರಂಗಕ್ಕೆ ಎಂಟ್ರಿ ನೀಡಿದ ಅವರು ಇದೀಗ ಬಿಜೆಪಿ ಪಕ್ಷಕ್ಕೆ ದಿಢೀರ್ ರಾಜೀನಾಮೆ ನೀಡಿರುವುದರಿಂದ ಕೇರಳ ರಾಜಕೀಯದಲ್ಲಿ ಸಂಚಲನ ಸೃಷ್ಟಿಯಾಗಿದೆ.
ಕಳೆದ ಹಲವು ದಿನಗಳಿಂದ ತಮಿಳುನಾಡಿನ ರಾಜಕೀಯದಲ್ಲಿ ಅಣ್ಣಾಮಲೈ ಹೊಸ ಪಕ್ಷ ಕಟ್ಟಲಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿತ್ತು. ಇದರ ಬೆಲೆ ಇದೀಗ ಭಾರತೀಯ ಜನತಾ ಪಾರ್ಟಿಗೆ ರಾಜೀನಾಮೆ ನೀಡಿರುವುದು ಕುತೂಹಲ ಮೂಡಿಸಿದೆ. ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾದ ಅಣ್ಣಾಮಲೈ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಇದನ್ನೂ ಓದಿ: ಪ್ರೇಮಾನಂದ್ ಮಹಾರಾಜರ ಆಶ್ರಮಕ್ಕೆ ಭೇಟಿ ನೀಡಿ ವಿರುಷ್ಕಾ
ದೆಹಲಿಗೆ ಭೇಟಿ ನೀಡಿರುವ ಅವರು ಪಕ್ಷದ ಉಸ್ತುವಾರಿ ಹಾಗೂ ಹಿರಿಯ ನಾಯಕರಾದ ನಿತಿನ್ ನಬಿನ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ. ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣಾ ಫಲಿತಾಂಶಗಳು ಮತ್ತು ಬಿಜೆಪಿಯ ಆಂತರಿಕ ಭಿನ್ನಾಭಿಪ್ರಾಯಗಳ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
