Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಜಿಬಿಎ ವತಿಯಿಂದ ಮಹತ್ವದ ಹೆಜ್ಜೆ
  • Bangalore
  • State

ಜಿಬಿಎ ವತಿಯಿಂದ ಮಹತ್ವದ ಹೆಜ್ಜೆ

Praja Vahini June 2, 2026 1 minute read
WhatsApp Image 2026-06-02 at 15.29.59
Spread the love

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ನಗರ ದಿನದಿಂದ ದಿನಕ್ಕೆ ದಟ್ಟವಾಗಿ ಬೆಳೆಯುತ್ತಿದೆ. ಕೇವಲ ಭಾರತ ದೇಶ ಮಾತ್ರವಲ್ಲದೆ ವಿವಿಧ ದೇಶಗಳಿಂದ ಬಂದು ಬೆಂಗಳೂರಿನಲ್ಲಿ ತಮ್ಮ ಜೀವನವನ್ನು ಕಟ್ಟಿಕೊಳ್ಳುತ್ತಿದ್ದಾರೆ.

ಇನ್ನು ಜನ ಹೆಚ್ಚಾಗುತ್ತಿದ್ದಂತೆಯೇ ವಾಹನ ದಟ್ಟಣೆಯು ಕೂಡ ಹೆಚ್ಚಾಗುತ್ತಿರುವುದು ಬೆಂಗಳೂರಿನ ಜನರಲ್ಲಿ ಆತಂಕ ಉಂಟು ಮಾಡಿದೆ. ಕೇವಲ ಐದು ನಿಮಿಷದ ಪ್ರಯಾಣಕ್ಕೆ ಸುಮಾರು 20 ರಿಂದ 30 ನಿಮಿಷ ಟ್ರಾಫಿಕ್ ಸಮಸ್ಯೆಯಿಂದ ಕಾಯಬೇಕಾಗುತ್ತದೆ ಹಾಗಾಗಿ ಇದನ್ನ ನಿವಾರಿಸಲು ಇದೀಗ ಜಿಬಿಎ ಮಹತ್ವದ ಹೆಜ್ಜೆಯನ್ನು ಇಟ್ಟಿದೆ.

ಹೌದು, ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಮತ್ತು ವಾಯು ಮಾಲಿನ್ಯವನ್ನು ನಿಯಂತ್ರಿಸಲು GBA ಹೊಸ ಪರಿಸರಸ್ನೇಹಿ ಅಭಿಯಾನಕ್ಕೆ ಚಾಲನೆ ನೀಡಿದೆ. ಜೂನ್ ತಿಂಗಳ ಪೂರ್ತಿ ನಡೆಯಲಿರುವ ಈ ಅಭಿಯಾನಕ್ಕೆ (ಒಂದು ಕಿಲೋಮೀಟರ್ ಚಾಲೆಂಜ್) ಎಂದು ಹೆಸರಿಡಲಾಗಿದ್ದು, 1 ಕಿಲೋಮೀಟರ್ ವ್ಯಾಪ್ತಿಯ ಒಳಗಿನ ಸಂಚಾರಕ್ಕೆ ವಾಹನಗಳನ್ನು ಬಳಸದೆ ನಡೆದುಕೊಂಡು ಹೋಗುವಂತೆ ನಾಗರಿಕರಿಗೆ ಮನವಿ ಮಾಡಲಾಗಿದೆ. ಈ ಅಭಿಯಾನವನ್ನು GBA ಯ ಕ್ಲೈಮೇಟ್ ಆಕ್ಷನ್ ಸೆಲ್ ಹಮ್ಮಿಕೊಂಡಿದೆ. ಇದನ್ನೂ ಓದಿ: ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ

ನಗರದಲ್ಲಿ ಜನರು ಅತಿ ಸಣ್ಣ ದೂರಗಳಿಗೂ ವಾಹನಗಳನ್ನು ಅವಲಂಬಿಸುತ್ತಿರುವುದರಿಂದ ಟ್ರಾಫಿಕ್ ಜಾಮ್ ಹಾಗೂ ಮಾಲಿನ್ಯ ಹೆಚ್ಚುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನು ಕಡಿಮೆ ಮಾಡಲು ದಿನನಿತ್ಯದ ಜೀವನದಲ್ಲಿ ನಡಿಗೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಸವಾಲು ರೂಪಿಸಲಾಗಿದೆ.

ಅಭಿಯಾನದ ಪ್ರಮುಖ ಉದ್ದೇಶಗಳು

ಈ ಅಭಿಯಾನದ ಮೂಲಕ ವಾಹನ ಬಳಕೆ ಕಡಿಮೆ ಮಾಡಿ ಮಾಲಿನ್ಯ ನಿಯಂತ್ರಿಸುವುದು, ಜನರ ಆರೋಗ್ಯ ಸುಧಾರಿಸುವುದು ಹಾಗೂ ರಸ್ತೆ ದಟ್ಟಣೆಯನ್ನು ತಗ್ಗಿಸುವುದು ಪ್ರಮುಖ ಗುರಿಗಳಾಗಿವೆ ಎಂದು ತಿಳಿಸಲಾಗಿದೆ.

 

About the Author

Praja Vahini

Editor

View All Posts

Spread the love

Post navigation

Previous: ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ
Next: ಅನಾರೋಗ್ಯದಿಂದ ಬಳಲುತ್ತಿದ್ದ ಅಭಿಮಾನಿ ಆರೋಗ್ಯ ವಿಚಾರಿಸಿದ ನಟ ಯಶ್

Views:

30

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.