ದೆಹಲಿ: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಆಗಿ ಡಿಕೆ ಶಿವಕುಮಾರ್ ಅವರು ನಾಳೆ (ಬುಧುವಾರ ಜೂನ್ 03) ರಂದು ಅದ್ದೂರಿಯಾಗಿ ಲೋಕ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಇನ್ನು ಡಿಕೆ ಶಿವಕುಮಾರ್ ಅವರ ಜೊತೆ ಹಲವು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಕುರಿತಾಗಿ ಇಂದು (ಮಂಗಳವಾರ ಜೂನ್ 02) ದೆಹಲಿಯಲ್ಲಿ ಕಾಂಗ್ರೆಸ್ ಹೈ ಕಮಾಂಡ್ ನಾಯಕರ ಜೊತೆ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಮಹತ್ವದ ಸಭೆ ನಡೆಸಿ ಚರ್ಚಿಸಿದ್ದಾರೆ. ಇದನ್ನೂ ಓದಿ: ಆಡಿಯೋ ವೈರಲ್; ದಿಢೀರ್ ಜಮೀರ್ ಭೇಟಿ ಮಾಡಿದ ಡಿಕೆ ಸುರೇಶ್
Aicc ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು.
