ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯ ಆಡಳಿತದಲ್ಲಿದ್ದಾಗ ಅವರ ನೇತೃತ್ವದ ಸಚಿವ ಸಂಪುಟದಲ್ಲಿ ಲಾಡ್ಲೆ ಮಶಕ್ ದರ್ಗಾದಲ್ಲಿ 2022 ರಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವ ತೀರ್ಮಾನ ಕೈಗೊಂಡಿದೆ.
ಈ ನಿರ್ಧಾರವನ್ನ ಕೈ ಬಿಡಬೇಕು ಎಂದು ಇಂದು (ಮಂಗಳವಾರ ಜೂನ್ 02) ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ನೇತೃತ್ವದ ಬಿಜೆಪಿ ನಿಯೋಗವು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ, ದೂರು ಸಲ್ಲಿಸಿದೆ. ಇದನ್ನೂ ಓದಿ: ಡಿಕೆಶಿ, ಸಿದ್ದು ಹೈ ಕಮಾಂಡ್ ಜೊತೆ ಮಹತ್ವದ ಚರ್ಚೆ
ಹೌದು, ಆಳಂದದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣ ವಾಪಸ್ ಪಡೆದ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಲು ಸೂಚಿಸಬೇಕು ಎಂದು ಬಿಜೆಪಿ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ. ಜೊತೆಗೆ ಕೇಸ್ ವಾಪಸ್ ಪಡೆದ ನಿರ್ಣಯ ರದ್ದುಪಡಿಸಲು ಸರ್ಕಾರಕ್ಕೆ ಸೂಕ್ತ ನಿರ್ದೇಶನ ಕೊಡುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.
