ಬೆಂಗಳೂರು: ನಗರಾಭಿವೃದ್ಧಿ ಸಚಿವ ಸ್ಥಾನ ನೀಡದಿದ್ದಕ್ಕೆ ಸಚಿವ ರಾಮಲಿಂಗ ರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ಇದೀಗ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದಾರೆ. ರಾಮಲಿಂಗಾ ರೆಡ್ಡಿ ಅವರು ಪ್ರಮುಖ ನಾಯಕರು ಹಾಗೂ ನನಗೆ ಬಹಳ ಆತ್ಮೀಯರಾಗಿದ್ದು, ಅವರೊಂದಿಗೆ ನಾನು ಮಾತನಾಡುತ್ತೇನೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ನಗರದಲ್ಲಿ ಇಂದು (ಶುಕ್ರವಾರ ಜೂನ್ 5) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಮಲಿಂಗಾ ರೆಡ್ಡಿ ಅವರು ಗ್ರಾಮೀಣ ಭಾಗದಿಂದ ಬಂದವರಲ್ಲ. ಅವರಿಗೆ ಜಲಸಂಪನ್ಮೂಲ ಸಚಿವಾಲಯ ಸಿಕ್ಕಿದ್ದು, ಅವರು ನಗರ ಪ್ರದೇಶದಲ್ಲಿ ಕೆಲಸ ಮಾಡಲು ಬಯಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ! ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ..
ಅಣ್ಮಮ್ಮ ದೇವಿ ಆಶೀರ್ವಾದ
ಬೆಂಗಳೂರು ನಗರ ದೇವತೆ ಅಣ್ಣಮ್ಮ ದೇವಿ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಅಣ್ಣಮ್ಮ ದೇವಿ ಬೆಂಗಳೂರಿನ ಗ್ರಾಮ ದೇವತೆ. ನಾಡಿನ ದೇವತೆ ಚಾಮುಂಡಿ ತಾಯಿ. ತಾಯಿ ದರ್ಶನ ಮಾಡಿ ಆಶೀರ್ವಾದ ಪಡೆದು, ರಾಜ್ಯದಲ್ಲಿ ಉತ್ತಮ ಮಳೆ, ಬೆಳೆ, ಸಮೃದ್ಧಿ, ನೆಮ್ಮದಿ, ಶಾಂತಿ ಸಿಗಲಿ ಎಂದು ಪ್ರಾರ್ಥಿಸಿ, ಕೆಲಸ ಪ್ರಾರಂಭಿಸಿದ್ದೇನೆ ಎಂದು ತಿಳಿಸಿದರು.
