Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಜರ್ಮನಿ ನಿಯೋಗದ ಜತೆ ಸಿಎಂ ಡಿಕೆಶಿ ಹೂಡಿಕೆ ಕುರಿತು ಚರ್ಚೆ
  • Bangalore
  • Politics
  • State

ಜರ್ಮನಿ ನಿಯೋಗದ ಜತೆ ಸಿಎಂ ಡಿಕೆಶಿ ಹೂಡಿಕೆ ಕುರಿತು ಚರ್ಚೆ

Praja Vahini June 5, 2026 1 minute read
WhatsApp Image 2026-06-05 at 14.01.34
Spread the love

ಬೆಂಗಳೂರು: ಪರಸ್ಪರ ಆರ್ಥಿಕ ಸಹಕಾರ ಬಲವರ್ಧನೆಯ ಉದ್ದೇಶದಿಂದ ಆಗಮಿಸಿರುವ ಜರ್ಮನಿಯ ತುರಿಂಜಿಯಾ ಪ್ರಾಂತ್ಯದ ಮಂತ್ರಿಮಂಡಲದ ಮುಖ್ಯಸ್ಥ (ಮಿನಿಸ್ಟರ್ ಪ್ರೆಸಿಡೆಂಟ್) ಮಾರಿಯೋ ವಾಯ್ಟ್ ನೇತೃತ್ವದ ಉನ್ನತ ಮಟ್ಟದ ನಿಯೋಗದ ಜತೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇಂದು (ಶುಕ್ರವಾರ ಜೂನ್ 5) ಖಾಸಗಿ ಹೋಟೆಲ್ ನಲ್ಲಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಎರಡೂ ಕಡೆಯವರಿಗೂ ಇರುವ ಅತ್ಯುತ್ತಮ ಅವಕಾಶಗಳನ್ನು ಗುರುತಿಸಲು ನಾವು ಪರಸ್ಪರ ನಿಕಟವಾಗಿ ಕೆಲಸ ಮಾಡಲಿದ್ದೇವೆ. ಇದರಲ್ಲಿ ಜಂಟಿ ಸಹಭಾಗಿತ್ವ, ತಂತ್ರಜ್ಞಾನ ವರ್ಗಾವಣೆ, ಕೌಶಲ್ಯ ಮತ್ತು ಪ್ರತಿಭಾ ವಿನಿಮಯ ಮುಂತಾದವು ಸೇರಿವೆ. ಈ ನಿಟ್ಟಿನಲ್ಲಿ ಕರ್ನಾಟಕ ಮತ್ತು ತುರಿಂಜಿಯಾ ಪ್ರಾಂತೀಯ ಸರಕಾರಗಳು ಜತೆಗೂಡಿ ನಾವೀನ್ಯತೆ ಮತ್ತು ಮುಂದಿನ ತಲೆಮಾರಿನ ತಂತ್ರಜ್ಞಾನದ ಧಾರೆಗಳತ್ತ ಗಮನ ಹರಿಸಲಿವೆ ಎಂದರು.

ನಂತರ ಸಚಿವ ಎಂ ಬಿ ಪಾಟೀಲ್ ಮಾತನಾಡಿ, ಕರ್ನಾಟಕ ಮತ್ತು ತುರಿಂಜಿಯಾ ನಡುವೆ ಆಪ್ಟಿಕ್ಸ್ ಮತ್ತು ಫೋಟಾನಿಕ್ಸ್, ಸೆಮಿಕಂಡಕ್ಟರ್, ಬಯೋಟೆಕ್, ವಿದ್ಯುಚ್ಚಾಲಿತ ವಾಹನ ತಯಾರಿಕೆ, ಮರುಬಳಕೆ ಇಂಧನ, ಆಧುನಿಕ ತಯಾರಿಕಾ ಕ್ಷೇತ್ರಗಳಲ್ಲಿ ಉಜ್ವಲ ಅವಕಾಶಗಳಿವೆ. ಆದ್ದರಿಂದ ತುರಿಂಜಿಯಾ ಪ್ರಾಂತ್ಯದ ಕಂಪನಿಗಳು ರಾಜ್ಯದಲ್ಲಿ ಈ ವಲಯಗಳಲ್ಲಿ ಹೆಚ್ಚಾಗಿ ಹೂಡಿಕೆ ಮಾಡಬೇಕು. ನಮ್ಮ ಕೈಗಾರಿಕಾ ನೀತಿಯಲ್ಲೂ ಈ ಕ್ಷೇತ್ರಗಳಿಗೆ ಒತ್ತು ಕೊಡಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ರಾಮಲಿಂಗಾರೆಡ್ಡಿ ರಾಜಿನಾಮೆ ಬೆನ್ನಲ್ಲೇ ಇದೀಗ ಮತ್ತೊಂದು ವಿಕೆಟ್ ಪತನಕ್ಕೆ ತಯಾರಿ!?

ರಾಜ್ಯದ ಎಲ್ಲಾ ಕಡೆಗಳಲ್ಲೂ ಕೈಗಾರಿಕೆಗಳು ನೆಲೆಯೂರಬೇಕು ಎನ್ನುವುದು ಸರಕಾರದ ಒತ್ತಾಸೆಯಾಗಿದೆ. ನಾವು ಈಗ ಸೇವಾವಲಯದಿಂದ ಉತ್ಪಾದನಾ ಆಧರುತವಾಗುತ್ತಿದೆ. ತುರಿಂಜಿಯಾ ಪ್ರಾಂತ್ಯದ ಕಂಪನಿಗಳು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಅವರು ನುಡಿದಿದ್ದಾರೆ.

ಇದಕ್ಕೆ ಸ್ಪಂದಿಸಿದ ಮಾರಿಯೋ ವಾಯ್ಟ್ ಅವರು, ರಾಜ್ಯದಲ್ಲಿರುವ ಆರ್ & ಡಿ ಕಾರ್ಯಪರಿಸರ, ಡಿಜಿಟಲ್ ಪ್ರತಿಭಾ ಸಂಪನ್ಮೂಲ, ಎಂಜಿನಿಯರಿಂಗ್, ವಿಶ್ವ ದರ್ಜೆಯ ನವೋದ್ಯಮ ಕಾರ್ಯ ಪರಿಸರ, ಕ್ವಾಂಟಂ ತಂತ್ರಜ್ಞಾನ, ಏರೋಸ್ಪೇಸ್ ವಲಯಗಳಲ್ಲಿ ಇರುವ ಮೂಲಸೌಕರ್ಯ ಇತ್ಯಾದಿಗಳನ್ನು ಪ್ರಶಂಸಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಎಲ್.ಕೆ.ಅತೀಕ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್ ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ರಾಮಲಿಂಗಾರೆಡ್ಡಿ ರಾಜಿನಾಮೆ ಬೆನ್ನಲ್ಲೇ ಇದೀಗ ಮತ್ತೊಂದು ವಿಕೆಟ್ ಪತನಕ್ಕೆ ತಯಾರಿ!?
Next: ಭೋವಿ ಸಮಾಜಕ್ಕೆ ಸಚಿವ ಸ್ಥಾನ ನೀಡಬೇಕು: ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

Views:

16

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.