ಬೆಂಗಳೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ದೆಹಲಿಯಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು (ಶುಕ್ರವಾರ ಜೂನ್ 5) ಬಂದಿಳಿದ ಸಂದರ್ಭದಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸಸಿ ನೆಟ್ಟು ನೀರೇರೆದರು. ಇದನ್ನೂ ಓದಿ: ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ
ಈ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿ ಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ನಿಕಟಪೂರ್ವ ಸಿಎಂ ಸಿದ್ದರಾಮಯ್ಯ, ಸಚಿವ ಎಂ ಬಿ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.
