ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕರಾದ ಎಂ ಸತೀಶ್ ರೆಡ್ಡಿ ಅವರ ನೇತೃತ್ವದಲ್ಲಿ ಇಂದು (ಭಾನುವಾರ ಜೂನ್ 7) ಮತದಾರರ ಪಟ್ಟಿ ಪರಿಷ್ಕರಣೆ (SIR) 2026ರ ಸಿದ್ಧತೆಗಳ ಕುರಿತು ಸಂಸ್ಕೃತಿ ಗೋಕುಲ್ ಕನ್ವೆನ್ಷನ್ ಹಾಲ್ನಲ್ಲಿ ಮಹತ್ವದ ಸಭೆ ನಡೆಸಲಾಯಿತು.
ಮುಂಬರುವ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಕಾರ್ಯಕರ್ತರಿಗೆ ಅಗತ್ಯ ಮಾರ್ಗದರ್ಶನ ಶಾಸಕ ಎಂ ಸತೀಶ್ ರೆಡ್ಡಿ ಅವರು ನೀಡಿದರು. ಕ್ಷೇತ್ರದ ಪ್ರತಿಯೊಬ್ಬ ಅರ್ಹ ಮತದಾರರ ಮಾಹಿತಿಯನ್ನು ಸಮರ್ಪಕವಾಗಿ ದಾಖಲಿಸಿ, ಪ್ರಜಾಪ್ರಭುತ್ವದ ಬಲವರ್ಧನೆಗೆ ಕೈಜೋಡಿಸುವಂತೆ ಕರೆ ನೀಡಲಾಯಿತು. ಇದನ್ನೂ ಓದಿ: ಸಂಡೇ ಆನ್ ಸೈಕಲ್
ಈ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರು ಹಾಗೂ ಜಯನಗರ ಶಾಸಕರಾದ ಶ್ರೀ ಸಿ ಕೆ ರಾಮಮೂರ್ತಿ ರವರು, ನಿಕಟಪೂರ್ವ ಬಿಬಿಎಂಪಿ ಸದಸ್ಯರು, ಮಾಜಿ ನಗರಸಭಾ ಸದಸ್ಯರು, ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
