Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಮ್ಮ ಮೆಟ್ರೋದಲ್ಲಿ ಸಾಮಾನ್ಯರಲ್ಲಿ ಸಾಮಾನ್ಯರಾದ ಸಿಎಂ ಡಿಕೆಶಿ
  • Bangalore
  • Politics
  • State

ನಮ್ಮ ಮೆಟ್ರೋದಲ್ಲಿ ಸಾಮಾನ್ಯರಲ್ಲಿ ಸಾಮಾನ್ಯರಾದ ಸಿಎಂ ಡಿಕೆಶಿ

Praja Vahini June 7, 2026 1 minute read
WhatsApp Image 2026-06-07 at 19.52.45
Spread the love

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೀಸೆಲ್, ಪೆಟ್ರೋಲ್ ಸೇರಿದಂತೆ ಗ್ಯಾಸ್ ದರ ಸಾಮಾನ್ಯರ ಕೈಗೆ ಎಟುಕದ ರೀತಿ ಬೆಲೆ ಏರುತ್ತಿರುವುದರಿಂದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆದ ನಂತರ ಇದೆ ಮೊದಲ ಬಾರಿಗೆ ನಮ್ಮ ಮೆಟ್ರೋದಲ್ಲಿ ಸಾರ್ವಜನಿಕರೊಂದಿಗೆ ಪ್ರಯಾಣಿಸಿದ್ದಾರೆ.

ಹೌದು, ಸಹ ಪ್ರಯಾಣಿಕರೊಂದಿಗೆ ಕುಶಲೋಪರಿ, ಚಿಕ್ಕ ಮಗುವಿಗೆ ಚಾಕಲೇಟ್ ಕೊಟ್ಟು, ಯುವಕ ಯುವತಿಯರೊಂದಿಗೆ ಸೆಲ್ಫಿ… ಇವಿಷ್ಟೂ ಸಿಎಂ ಡಿ.ಕೆ. ಶಿವಕುಮಾರ್ ಅವರು ಇಂದು (ಭಾನುವಾರ ಜೂನ್ 7) ಮೆಟ್ರೋ ಪ್ರಯಾಣದ ಸುಂದರ ಚಿತ್ರಣ.

ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ತವರು ಕ್ಷೇತ್ರದ ಜನರ ಭೇಟಿಗೆ ಹೊರಟ ಸಿಎಂ ಡಿ.ಕೆ.ಶಿವಕುಮಾರ್ ಅವರು ಜೀರೋ ಟ್ರಾಫಿಕ್ ನಿಂದ ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ತಪ್ಪಿಸಲು ವಿಧಾನಸೌಧದಿಂದ ಬಳಿಯಿಂದ ಕನಕಪುರ ರಸ್ತೆವರೆಗೂ ಮೆಟ್ರೋ ಮೂಲಕ ಪ್ರಯಾಣ ಬೆಳೆಸಿದರು.

ಡಾ. ಬಿ.ಆರ್.ಅಂಬೇಡ್ಕರ್ ಮೆಟ್ರೋ ನಿಲ್ದಾಣದಲ್ಲಿ ಕೆಲಹೊತ್ತು ದಿನ ಪತ್ರಿಕೆಗಳ ಮೇಲೆ ಕಣ್ಣಾಡಿಸಿದ ಸಿಎಂ ನಂತರ ಮೆಟ್ರೋ ಪ್ರಯಾಣಿಕರಿಗೆ ಹಸ್ತಲಾಘವ ಮಾಡಿದರು. ಯುವಕ ಯುವತಿಯರು “ನಮ್ಮ ಸಿಎಂ” ಎಂದು ಹುಮ್ಮಸ್ಸಿನಿಂದ ಮಾತನಾಡಿಸಿ ಹಸ್ತಲಾಘವ ಮಾಡಿದರು. ಅನೇಕರು ಮುಖ್ಯಮಂತ್ರಿಗಳ ಜೊತೆ ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದರು.

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೆಟ್ರೋ ರೈಲು ಪ್ರಯಾಣದಿಂದ ಸಾಕಷ್ಟು ಸಮಯ ಉಳಿಯುತ್ತಿದೆ ಎಂದು ಉತ್ತರಿಸಿದರು. ಇದೇ ವೇಳೆ ಮಗುವಿಗೆ ಚಾಕೊಲೇಟ್ ನೀಡಿ ಅವರ ಫೋಷಕರ ಜೊತೆ ಸೆಲ್ಫಿ ತೆಗೆದುಕೊಂಡರು. ಮಗುವೊಂದು ನನಗೂ ಫೋಟೋ ಕೊಡಿ ಎಂದಾಗ ಸ್ವತಃ ಮುಖ್ಯಮಂತ್ರಿಗಳೇ ಮೊಬೈಲ್ ಪಡೆದುಕೊಂಡು ಸೆಲ್ಫಿ ಕೊಟ್ಟರು.

ಹಿರಿಯ ನಾಗರಿಕರೊಬ್ಬರು ಡಿ.ಕೆ.ಶಿವಕುಮಾರ್ ಅವರನ್ನು ಕೊಂಡೊಡನೆ “ನಿಮ್ಮನ್ನು ಮೆಟ್ರೋ ರೈಲಿನಲ್ಲಿ ನೋಡಿ ತುಂಬಾ ಸಂತೋಷವಾಯಿತು. ಒಳ್ಳೆಯದಾಗಲಿ” ಎಂದು ಹಾರೈಸಿದರು‌. ಇದನ್ನೂ ಓದಿ: ಕ್ಷೇತ್ರದ ಪ್ರತಿಯೊಬ್ಬ ಅರ್ಹ ಮತದಾರರ ಮಾಹಿತಿಯನ್ನು ಸಮರ್ಪಕವಾಗಿ ದಾಖಲಿಸಿ: ಸತೀಶ್ ರೆಡ್ಡಿ

ವಿದೇಶಿ ಪ್ರವಾಸಿಗರಿಗೆ ಮೆಟ್ರೋ ಪ್ರಯಾಣ ಅನುಭವ ಹೇಗಿದೆ ಎಂದು ಕೇಳಿ ತಿಳಿದುಕೊಂಡರು. ಯುವತಿಯೋರ್ವರಿಗೆ ಏನು ಓದುತ್ತಿದ್ದೀರಿ? ಎಲ್ಲಿ? ಎಲ್ಲಿ ವಾಸ ಮಾಡುತ್ತಿದ್ದೀರಿ? ಎಂದು ಮಾಹಿತಿ ಪಡೆದು. ಚೆನ್ನಾಗಿ ಓದಬೇಕು. ಭಾರತವನ್ನು ಕರ್ನಾಟಕದ ಮೂಲಕ ನೋಡಲಾಗುತ್ತಿದೆ. ಸಿಕ್ಕ ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

 

About the Author

Praja Vahini

Editor

View All Posts

Spread the love

Post navigation

Previous: ಕ್ಷೇತ್ರದ ಪ್ರತಿಯೊಬ್ಬ ಅರ್ಹ ಮತದಾರರ ಮಾಹಿತಿಯನ್ನು ಸಮರ್ಪಕವಾಗಿ ದಾಖಲಿಸಿ: ಸತೀಶ್ ರೆಡ್ಡಿ
Next: ಗದಗ ರಾಜಕೀಯದಲ್ಲಿ ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.