ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ ಮೊಮ್ಮಗನಾಗಿದ್ದ ಸೂರಜ್ ಹೆಗ್ಡೆ ಅವರಿಗೆ ಜೂನ್ 7 ರಂದು ಹೃದಯಾಘಾತ ಸಂಭವಿಸಿತು. ತಕ್ಷಣ ಅವರನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.
ಇನ್ನು ಸೂರಜ್ ಹೆಗಡೆ ಅವರ ಅಂತಿಮ ದರ್ಶನವನ್ನು ಈಗಾಗಲೇ ರಾಜಕೀಯ ಘಟಾನುಘಟಿಗಳು ಪಡೆದಿದ್ದು, ಅದರಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಸೂರಜ್ ಹೆಗಡೆ ಅವರ ಅಂತಿಮ ದರ್ಶನ ಪಡೆದಿದ್ದಾರೆ.
ಇಂದು (ಮಂಗಳವಾರ ಜೂ. 9) ಬೆಳಗ್ಗೆ ರಾಹುಲ್ ಗಾಂಧಿ ಸೂರಜ್ ಹೆಗ್ಡೆ ಡಾಲರ್ಸ್ ಕಾಲೋನಿ ನಿವಾಸಕ್ಕೆ ಆಗಮಿಸಿ ಅಂತಿಮ ದರ್ಶನ ಪಡೆದರು. ರಾಹುಲ್ ಗಾಂಧಿ ಅವರಿಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಜಿ ಸಿಎಂ ಸಿದ್ದರಾಮಯ್ಯ ಸಾಥ್ ನೀಡಿದರು. ಇದನ್ನೂ ಓದಿ: ಸೂರಜ್ ಹೆಗ್ಡೆಯವರ ನಿಧನಕ್ಕೆ ಪ್ರಿಯಾಂಕ್ ಖರ್ಗೆ ಶೋಕ
ಎಐಸಿಸಿ ಕಾರ್ಯದರ್ಶಿ, ಕೆಪಿಸಿಸಿ ಉಪಾಧ್ಯಕ್ಷ ಹಾಗೂ ತಮಿಳುನಾಡು ಮತ್ತು ಪುದುಚೇರಿ ಕಾಂಗ್ರೆಸ್ ಉಸ್ತುವಾರಿಯಾಗಿ ಕೆಲಸ ಮಾಡಿದ್ದ ಇವರು ದೇವರಾಜ ಅರಸು ಅವರಂತೆ ಹಿಂದುಳಿದ ವರ್ಗಗಳು, ಕಾರ್ಮಿಕರ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸಿದ್ದರು.
