ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಮಹತ್ವದ ಗ್ಯಾರಂಟಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ಹಣ ದುರುಪಯೋಗ ತಡೆಗಟ್ಟಲು ರಾಜ್ಯ ಸರ್ಕಾರ ಇದೀಗ ಮುಂದಾಗಿದ್ದು, ಇನ್ಮುಂದೆ ಗೃಹಲಕ್ಷ್ಮಿ ಹಣ ಪಡೆಯಬೇಕಾದರೆ ಕಡ್ಡಾಯವಾಗಿ ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯುತ್ತಿರುವ ಮಹಿಳೆಯರು ಬಯೋಮೆಟ್ರಿಕ್ ಮಾಡಿಸಿಕೊಳ್ಳಬೇಕಾಗುತ್ತದೆ ಎಂಬ ಮಾಹಿತಿ ಹೊರಬಂದಿದೆ.
ಹೌದು, ರಾಜ್ಯದಲ್ಲಿ ಈಗಾಗಲೇ ಕಳೆದ ಮೂರು ವರ್ಷಗಳಿಂದ ಗೃಹಲಕ್ಷ್ಮಿ ಯೋಜನೆಯ ಚಾಲ್ತಿಯಲ್ಲಿದ್ದು, ಇದರಲ್ಲಿ ಹಣ ದುರುಪಯೋಗ ಆಗುತ್ತಿರುವುದರಿಂದ ಜಾಗೃತವಾದ ಸರ್ಕಾರವು ಹಣ ದುರುಪಯೋಗ ತಡೆಗಟ್ಟಲು ಇನ್ಮುಂದೆ ಬಯೋಮೆಟ್ರಿಕ್ ಸಿಸ್ಟಮ್ ಅನ್ನು ಜಾರಿ ಮಾಡಲು ಮುಂದಾಗಿದೆ.
ಇನ್ನು ಬಯೋಮೆಟ್ರಿಕ್ಗೆ ಗೃಹಲಕ್ಷ್ಮಿ ಫಲಾನುಭವಿಗಳು ಶುಲ್ಕವನ್ನ ಪಾವತಿ ಮಾಡಬೇಕಿದೆ. ಬಯೋಮೆಟ್ರಿಕ್ ಆಗದೇ ಇದ್ದರೆ 2 ಸಾವಿರ ರೂ. ಅಮೌಂಟ್ ಬರುವುದಿಲ್ಲ. ಹೀಗಾಗಿ ಬಯೋಮೆಟ್ರಿಕ್ ಮಾಡಿಸಿಕೊಳ್ಳಲು ಪ್ರತಿ ಫಲಾನುಭವಿ 5 ರೂ. ಶುಲ್ಕವನ್ನ ಪಾವತಿ ಮಾಡಬೇಕಿದೆ. ಇದನ್ನೂ ಓದಿ: ರೈಲ್ವೆ ಅಧಿಕಾರಿಗಳ ಜೊತೆ ವಿ ಸೋಮಣ್ಣ ಮಹತ್ವದ ಸಭೆ
ಮುಂದಿನ ತಿಂಗಳ ಒಳಗಡೆ ಬಯೋಮೆಟ್ರಿಕ್ ಜಾರಿ ಮಾಡುವ ಚಿಂತನೆಯಲ್ಲಿದ್ದು, ಈಗಾಗಲೇ ಗೃಹಲಕ್ಷ್ಮಿ ಬಯೋಮೆಟ್ರಿಕ್ಗಾಗಿ ಆಪ್ ಸಿದ್ಧಪಡಿಸಲಾಗುತ್ತಿದೆ.
