ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬಕ್ಕೆ ಆರ್ ಎಸ್ ಎಸ್ ಎಂದರೆ ಆಗುವುದಿಲ್ಲ. ಹಾಗಾಗಿ ಅವರ ಮಗ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಆರ್ ಎಸ್ ಎಸ್ ವಿರುದ್ಧ ಆಗಾಗ ಗುಡುಗುತ್ತಲೇ ಇರುತ್ತಾರೆ.
ಹೌದು, ಆರ್ ಎಸ್ ಎಸ್ ಅವರು ನೋಂದಣಿ ಮಾಡಿಸಲು ರೆಡಿಯಾಗಿ ಎಂಬ ಗೃಹ ಸಚಿವ ಪ್ರಿಯಾಂಕ ಖರ್ಗೆ ಅವರ ಹೇಳಿಕೆ ಕುರಿತು ಇದೀಗ ಸಿಟಿ ರವಿ ಅವರು ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಇಂದು (ಮಂಗಳವಾರ ಜೂನ್ 9) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನೆಹರು ಅವರು ಪ್ರಧಾನಿ ಅದಾಗಿನಿಂದಲೂ ಆರ್ ಎಸ್ ಎಸ್ ಅವರನ್ನ ಏನು ಮಾಡಲು ಸಾಧ್ಯವಾಗಿಲ್ಲ. ಅಲ್ಲದೆ ನಿಮ್ಮ ಅಪ್ಪ ಅವರ ಕೈಯಿಂದ ಏನು ಮಾಡಲು ಆಗಿಲ್ಲ ಈಗ ನೀವೇನು ಮಾಡಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ನೆಹರು ಪ್ರಧಾನಿ ಆಗಿದ್ದರು, ಅವರು ಆರ್ಎಸ್ಎಸ್ ವಿರೋಧ ಮಾಡಿದರು. ಆರ್ಎಸ್ಎಸ್ ಇನ್ನು ಇದೆ. ನೆಹರು ಇಲ್ಲ. ಇಂದಿರಾಗಾಂಧಿ ತುರ್ತುಸ್ಥಿತಿ ಹೇರಿದರು. ಆರ್ಎಸ್ಎಸ್ ಬ್ಯಾನ್ ಮಾಡಿದರು. ಇಂದಿರಾಗಾಂಧಿ ಇಲ್ಲ. ಆರ್ಎಸ್ಎಸ್ ಇನ್ನು ಇದೆ. ಪ್ರಿಯಾಂಕ್ ಅವರೇ ನೀವು ನಿನ್ನೆ ಮೊನ್ನೆ ಹೋಂ ಮಿನಿಸ್ಟರ್ ಆಗಿರೋದು. ನಿಮ್ಮ ಅಪ್ಪ ನಿಮಗಿಂತ ಮುಂಚೆ ಗೃಹ ಸಚಿವರು ಆಗಿದ್ದರು. ನಿಮ್ಮಪ್ಪನಿಂದ ಏನು ಮಾಡಲು ಆಗಿಲ್ಲ ಇನ್ನು ನಿಮ್ಮಿಂದ ಆಗುತ್ತಾ ಎಂದು ಕಿಡಿಕಾರಿದರು. ಇದನ್ನೂ ಓದಿ: ಬಿಟ್ ಕಾಯಿನ್ ಕೇಸ್; ನಲಪಾಡ್ಗೆ ಶುರುವಾಯ್ತು ಕಾನೂನು ಭೀತಿ
ನೀವು ಸರ್ವಾಧಿಕಾರಿ ಅಲ್ಲ. ಇದು ನಿಮ್ಮ ಪಕ್ಷದ ಕೊನೆ ದಿನಗಳು. ನಿಮ್ಮ ಅಪ್ಪನ ಆಣೆ ಕಾಂಗ್ರೆಸ್ ಮುಂದೆ ಅಧಿಕಾರಕ್ಕೆ ಬರಲ್ಲ.ಆರ್ಎಸ್ಎಸ್ ರಾಷ್ಟ್ರದ ಕೆಲಸ, ವ್ಯಕ್ತಿಗೆ ಸಂಸ್ಕಾರ ಕೊಡುವ ಕೆಲಸ ಮಾಡುತ್ತಿದೆ. ನೋಂದಣಿ ಮಾಡೋಕೆ ಅದು ಸಂಘ ಅಲ್ಲ. ಸಮಾಜವನ್ನ ಸಂಘಟಿಸುವ ಸಂಘಟನೆ ಅದು. ನಿಮಗೆ ಗೃಹ ಸಚಿವರಾಗಿ ಬೇರೆ ಕೆಲಸ ಇದೆ. ಅದನ್ನ ನೋಡಿ. ಅಕ್ರಮ ಬಾಂಗ್ಲಾ ವಲಸಿಗರು ಇದ್ದಾರೆ. ದರೋಡೆ, ಡ್ರಗ್ಸ್, ಹೆಣ್ಣು ಮಕ್ಕಳು ನಾಪತ್ತೆ ಈ ಬಗ್ಗೆ ಗಮನಹರಿಸಿ. ಆರ್ಎಸ್ಎಸ್ನಿಂದ ಅಪಾಯ ಇಲ್ಲ. ಇಲ್ಲೇ ಇದ್ದು ಬಾಂಬ್ ತಯಾರು ಮಾಡೋರ ಕಡೆ ಗಮನ ಕೊಡಿ ಎಂದು ಹರಿಹಾಯ್ದರು.
