ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಈಗಾಗಲೇ ದೇಶದಲ್ಲಿ ಹಲವಾರು ಇತಿಹಾಸಗಳನ್ನು ಸೃಷ್ಟಿಸಿರುವ ಅವರು ಇದೀಗ ಮತ್ತೊಂದು ದಾಖಲೆಯನ್ನು ಬರೆದಿದ್ದಾರೆ.
ಹೌದು, ಭಾರತದ ರಾಜಕೀಯ ಇತಿಹಾಸದಲ್ಲಿಯೇ ಪ್ರಧಾನಿ ನರೇಂದ್ರ ಮೋದಿಯವರು ಅತಿ ದೀರ್ಘಾವಧಿ ಚುನಾಯಿತ ಭಾರತದ ಪ್ರಧಾನಿ ಎಂಬ ಹೆಗ್ಗಳಿಕೆಗೆ ಇದೀಗ ನರೇಂದ್ರ ಮೋದಿಯವರು ಪಾತ್ರರಾಗಿದ್ದಾರೆ.
ಇನ್ನು ಭಾರತದ ಮೊದಲ ಪ್ರಧಾನಿ ಜವಾಹರ್ಲಾಲ್ ನೆಹರು ಅವರ ದಶಕಗಳ ದಾಖಲೆಗಳನ್ನು ಇದೀಗ ಪ್ರಧಾನಿ ನರೇಂದ್ರ ಮೋದಿಯವರು ಹಿಂದಿಕ್ಕಿ ದಾಖಲೆ ಬರೆದಿದ್ದಾರೆ.
ಯೆಸ್…ಪ್ರಧಾನಿ ನರೇಂದ್ರ ಮೋದಿಯವರು ಇಂದಿಗೆ (ಬುದುವಾರ ಜೂನ್ 10) ಪ್ರಧಾನಿಯಾಗಿ ಸತತ 4,399 ದಿನಗಳ ಸುಸ್ಥಿರ ಆಡಳಿತವನ್ನು ಪೂರ್ಣಗೊಳಿಸಿದ್ದು, ಜಾಗತಿಕ ರಂಗದಲ್ಲಿ ಭಾರತೀಯ ಪ್ರಜಾಪ್ರಭುತ್ವದ ಶಕ್ತಿಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಇದನ್ನೂ ಓದಿ: ನಿಮ್ಮಪ್ಪನಿಂದ RSS ಏನು ಮಾಡಲು ಆಗಿಲ್ಲ ಇನ್ನು ನಿಮ್ಮಿಂದ ಆಗುತ್ತಾ?: ಗೃಹ ಸಚಿವರ ವಿರುದ್ಧ ಸಿಟಿ ರವಿ ವಾಗ್ದಾಳಿ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯಶಸ್ವಿಯಾಗಿ 12 ವರ್ಷಗಳನ್ನು ಪೂರೈಸಿರುವುದು ಮತ್ತು ಅವರು ದೇಶದ ಅತ್ಯಂತ ದೀರ್ಘಾವಧಿಯ ಚುನಾಯಿತ ಪ್ರಧಾನಿಯಾಗಿ ಹೊರಹೊಮ್ಮಿರುವುದನ್ನು ಸಂಭ್ರಮಿಸಲು ಎನ್ಡಿಎ ಭಾರತ್ ಮಂಟಪದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದೆ.
