ಗದಗ: ಪ್ರಧಾನಿ ನರೇಂದ್ರ ಮೋದಿಯವರು ಭಾರತ ರಾಜಕೀಯ ಇತಿಹಾಸದಲ್ಲಿ ಹೊಸ ಮೈಲುಗಲು ಬರೆದಿರುವ ಅವರು, ಇಂದಿಗೆ ಪ್ರಧಾನಿಯಾಗಿ 4399 ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಇಡೀ ದೇಶದಲ್ಲಿ ಬಿಜೆಪಿ ಕಾರ್ಯಕರ್ತರು, ಬಿಜೆಪಿ ನಾಯಕರು ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಅಭಿಮಾನಿಗಳು ದೇವಸ್ಥಾನದ ಮೊರೆ ಹೋಗಿದ್ದಾರೆ
ಹೌದು, ಪ್ರಧಾನಿ ನರೇಂದ್ರ ಮೋದಿಯವರು ಐತಿಹಾಸಿಕ ದಾಖಲೆ ಬರೆದಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹಾಗೂ ಸಂಸದರಾದ ಬಸವರಾಜ್ ಬೊಮ್ಮಾಯಿಯವರು ಇಂದು (ಬುಧವಾರ ಜೂನ್ 10) ಗದಗ ನಗರದ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಭಾರತದ ಹೆಮ್ಮೆಯ ಪ್ರಧಾನ ಮಂತ್ರಿಗಳಾಗಿ 4399 ದಿನಗಳ ಆಡಳಿತದ ಐತಿಹಾಸಿಕ ಮೈಲುಗಲ್ಲು ಸ್ಥಾಪಿಸಿದ ಭಾರತದ ಹೆಮ್ಮೆಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ಅತಿ ದೀರ್ಘಾವಧಿ ಚುನಾಯಿತ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ವಿಶೇಷ ಪೂಜೆ ಸಲ್ಲಿಸಿದರು. ಇದನ್ನೂ ಓದಿ: ಭಾರತದ ರಾಜಕೀಯ ಇತಿಹಾಸದಲ್ಲಿ ಐತಿಹಾಸಿಕ ದಾಖಲೆ ಬರೆದ ನರೇಂದ್ರ ಮೋದಿ
ಈ ಸಂಧರ್ಭದಲ್ಲಿ ಶಾಸಕರಾದ ಸಿ.ಸಿ.ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಭಾರತೀಯ ಜನತಾ ಪಾರ್ಟಿಯ ಜಿಲ್ಲಾಧ್ಯಕ್ಷರಾದ ರಾಜು ಕುರಡಗಿ ಸೇರಿದಂತೆ ಪಕ್ಷದ ಹಲವಾರು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
