ದೆಹಲಿ: ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಇದೆ ಮೊದಲ ಬಾರಿಗೆ ದೆಹಲಿಗೆ ಭೇಟಿ ನೀಡಿ ಕಾಂಗ್ರೆಸ್ ಹೈಕಮಾಂಡನ ಭೇಟಿ ಮಾಡಿ ಸುದೀರ್ಘವಾಗಿ ಚರ್ಚಿಸಿದ್ದಾರೆ ನಡೆಸಿದ್ದಾರೆ.
ಹೌದು, ಕರ್ನಾಟಕದ ನೂತನ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಅವರು ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ದೆಹಲಿಯ 10 ಜನಪಥ್ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ಅವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. ಇದನ್ನೂ ಓದಿ: ಅವಿರೋಧವಾಗಿ ರಾಜ್ಯಸಭಾ ಸದಸ್ಯರಾಗಿ ಮನ್ಸೂರ್ ಆಲಿಖಾನ್ ಆಯ್ಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಈ ದೆಹಲಿ ಭೇಟಿಯ ವೇಳೆ ಕೇವಲ ಸೋನಿಯಾ ಗಾಂಧಿ ಮಾತ್ರವಲ್ಲದೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೂ ಉಪಸ್ಥಿತರಿದ್ದರು. ಸಿಎಂ ಆದ ಬಳಿಕ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ ಶಿವಕುಮಾರ್ ಅವರಿಗೆ ಗಾಂಧಿ ಕುಟುಂಬದ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡು ಶುಭ ಹಾರೈಸಿದ್ದಾರೆ.
