Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರೈತರಿಗೆ ಸಕಾಲದಲ್ಲಿ ಗೊಬ್ಬರ ಸಿಗುವಂತೆ ವ್ಯವಸ್ಥೆ ಮಾಡಬೇಕು: ಕಾಂತರಾಜು.ಪಿ.ಎಸ್
  • Bangalore
  • Politics
  • State

ರೈತರಿಗೆ ಸಕಾಲದಲ್ಲಿ ಗೊಬ್ಬರ ಸಿಗುವಂತೆ ವ್ಯವಸ್ಥೆ ಮಾಡಬೇಕು: ಕಾಂತರಾಜು.ಪಿ.ಎಸ್

Praja Vahini June 10, 2026 1 minute read
WhatsApp Image 2026-06-10 at 17.13.34
Spread the love

ಬೆಂಗಳೂರು: ಜಿಲ್ಲೆಯಲ್ಲಿ ಮುಂಗಾರು ಬಿತ್ತನೆ ಪ್ರಾರಂಭವಾಗಲಿದ್ದು ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಸಕಾಲದಲ್ಲಿ ಮತ್ತು ನಿಗದಿತ ಬೆಲೆಯಲ್ಲಿ ಒದಗಿಸಬೇಕು. ಜಿಲ್ಲೆಯ ರೈತರಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಮತ್ತು ರಸಗೊಬ್ಬರ ಪೂರೈಕೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ಕಾಂತರಾಜು ಪಿ.ಎಸ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕೃಷಿ ಪರಿಕರಗಳ ಉಸ್ತುವಾರಿ ಸಮಿತಿ ಸಭೆ ಮತ್ತು ಯೂರಿಯಾ ಕೃಷಿಯೇತರ ಬಳಕೆ ತಡೆಗಟ್ಟುವ ಸಂಬಂಧ ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಅಗತ್ಯ ಪ್ರಮಾಣದ ರಸಗೊಬ್ಬರವನ್ನು ಕಾಯ್ದಿರಿಸಲು ಮತ್ತು ಅದರ ಸಕಾಲಿಕ ವಿತರಣೆಗೆ ಕ್ರಮ ಕೈಗೊಳ್ಳಬೇಕು. ರೈತರಿಗೆ ಸಕಾಲದಲ್ಲಿ ಗೊಬ್ಬರ ಸಿಗುವಂತೆ ವ್ಯವಸ್ಥೆ ಮಾಡಬೇಕೆಂದರು.

ಜಿಲ್ಲೆಗೆ ಸರಬರಾಜಾಗುವ ರಸಗೊಬ್ಬರವನ್ನು ಕಂಪನಿಗಳು ಡೀಲರ್ಗಳಿಗೆ ಹಂಚಿಕೆ ಮಾಡುವಾಗ ಪಾರದರ್ಶಕತೆ ಕಾಯ್ದುಕೊಳ್ಳಬೇಕು. ರಸಗೊಬ್ಬರವನ್ನು ದಾಸ್ತಾನು ಮಾಡಿ ಕೃತಕ ಅಭಾವ ಸೃಷ್ಟಿಸುವುದನ್ನು ತಡೆಗಟ್ಟಲು ಕೃಷಿ ಇಲಾಖೆ ಅಧಿಕಾರಿಗಳು ನಿರಂತರ ನಿಗಾವಹಿಸಬೇಕು ಎಂದು ಹೇಳಿದರು.

ಅಧಿಕಾರಿಗಳು ಕೇವಲ ಅಂಕಿ-ಅಂಶಗಳನ್ನು ನೀಡದೆ, ವಾಸ್ತವದಲ್ಲಿ ರೈತರಿಗೆ ತಲುಪಿರುವ ಸೌಲಭ್ಯಗಳ ಬಗ್ಗೆ ನಿಗಾ ವಹಿಸಬೇಕು. ಯಾವುದೇ ನಿರ್ಲಕ್ಷ್ಯ ಕಂಡುಬಂದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಗೆ ನೀಡಿದರು.

ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕರಾದ ಎಂ.ಸಿ ಸೀತ ಅವರು ಮಾತನಾಡಿ, ಜಿಲ್ಲೆಯಲ್ಲಿ ಈವರೆಗೆ 167.9 ಮೀಮೀ ವಾಡಿಕೆ ಮಳೆಯಾಗಿದ್ದು, ಮುಂಗಾರು ಹಂಗಾಮಿಗೆ 21022 ಹೆ. ಕೃಷಿ ಬಿತ್ತನೆ ಗುರಿ ಇದ್ದು, ಪ್ರಸ್ತುತ ಭೂಮಿ ಸಿದ್ಧತೆ ಕಾರ್ಯ ಪ್ರಗತಿಯಲಿದೆ. 1069.58 ಕ್ವಿ ಬಿತ್ತನೆ ಬೀಜ ಬೇಡಿಕೆ ಇದ್ದು 317.9 ಕ್ವಿಂ ಬಿತ್ತನೆ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನೀಕರಿಸಿ ವಿಸ್ತರಿಸಲಾಗುವುದು ಹಾಗೂ ಮುಂದಿನ ದಿನಗಳಲ್ಲಿ ಬೇಡಿಕೆಗನುಗುಣವಾಗಿ ಬಿತ್ತನೆ ಬೀಜಗಳನ್ನು ದಾಸ್ತಾನೀಕರಿಸಿ ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು.  ಇದನ್ನೂ ಓದಿ: ಅವಿರೋಧವಾಗಿ ರಾಜ್ಯಸಭಾ ಸದಸ್ಯರಾಗಿ ಮನ್ಸೂರ್ ಆಲಿಖಾನ್ ಆಯ್ಕೆ

ರಿಯಾಯಿತಿ ದರದ ಬೇವು ಲೇಪಿತ ಯೂರಿಯಾ ರಸಗೊಬ್ಬರವನ್ನು ಕೃಷಿಯೇತರ ಚಟುವಕೆಗಳಿಗೆ ಬಳಕೆ ಮಾಡುತ್ತಿರುವುದನ್ನು ಹಾಗೂ ಜಿಲ್ಲೆಯ ಕೈಗಾರಿಕಾ ಪ್ರದೇಶಗಳಲ್ಲಿ ಯೂರಿಯಾ ರಸಗೊಬ್ಬರವನ್ನು ಕೃಷಿಯೇತರ ಚಟುವಟಿಕೆಗಳಿಗೆ ಬಳಕೆ ಮಾಡುತ್ತಿರುವುದನ್ನು ತಡೆಯಲು ಕ್ರಮವಹಿಸಲಾಗುತ್ತಿದೆ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಗಾಂಧಿ ಕುಟುಂಬ ಭೇಟಿ ಮಾಡಿದ ಸಿಎಂ ಡಿಕೆಶಿ
Next: ಶೌಚಾಲಯಕ್ಕಾಗಿ ತಾ.ಪಂ ಎದುರು ಮಹಿಳೆಯರ ಪ್ರತಿಭಟನೆ

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.