ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ ಸತೀಶ್ ರೆಡ್ಡಿ ಅವರು ಇಂದು (ಗುರುವಾರ ಜೂನ್ 11) ಕೋಡಿಚಿಕ್ಕನಹಳ್ಳಿಯಲ್ಲಿ ನೂತನವಾಗಿ ಪ್ರಾರಂಭಗೊಂಡ 9ನೇ ತರಗತಿ ಪ್ರೌಢ ಶಾಲೆಯನ್ನು ಉದ್ಘಾಟಿಸಿದರು.
ನೂತನವಾಗಿ ಶಾಲಾ ಉದ್ಘಾಟಿಸಿದ ನಂತರ ಮಾತನಾಡಿದ ಅವರು, ಈ ಶಾಲೆಯ ಆರಂಭದಿಂದಾಗಿ ಸ್ಥಳೀಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ತಮ್ಮ ಪ್ರದೇಶದಲ್ಲೇ ಪಡೆಯಲು ಹೆಚ್ಚಿನ ಅವಕಾಶಗಳು ಲಭಿಸಲಿವೆ. ಶಿಕ್ಷಣದ ಮೂಲಕ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ. ಎಂದು ತಿಳಿಸಿದರು.
ಎಲ್ಲಾ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಹಾಗೂ ವ್ಯಕ್ತಿತ್ವ ವಿಕಸನದ ದಾರಿಯಲ್ಲಿ ಉನ್ನತ ಸಾಧನೆಗಳನ್ನು ಮಾಡಲಿ ಎಂದು ಹಾರೈಸಿದರು. ಇದನ್ನೂ ಓದಿ: ಪೊಲೀಸ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಗೃಹ ಸಚಿವರು
ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ, ಪೋಷಕರು ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
