Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರಕಾರ: ಬಿವೈವಿ
  • Bangalore
  • Politics
  • State

ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರಕಾರ: ಬಿವೈವಿ

Praja Vahini June 11, 2026 1 minute read
WhatsApp Image 2026-06-11 at 14.52.16
Spread the love

ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ಯಾವುದೇ ಅಭಿವೃದ್ಧಿ ಕಾರ್ಯವನ್ನು ಮಾಡದೆ  ಕೇವಲ ಕೇಂದ್ರ ಸರ್ಕಾರದ ವಿರುದ್ಧ ಪದೇ ಪದೇ ಆರೋಪ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಕಿಂಚಿತ್ತು ಮರ್ಯಾದೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ.

ನಗರದಲ್ಲಿ ಇಂದು (ಗುರುವಾರ ಜೂ. 11) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರಕಾರವು ತನ್ನ ವೈಫಲ್ಯ ಮುಚ್ಚಿ ಹಾಕುವ ಸಲುವಾಗಿ ಕೇಂದ್ರ ಸರಕಾರ ಮಲತಾಯಿ ಧೋರಣೆ ಮಾಡುತ್ತಿದೆ; ಅನ್ಯಾಯ ಮಾಡುತ್ತ ಇದೆ ಎಂದು ಪದೇಪದೇ ಪ್ರಸ್ತಾಪಿಸುತ್ತದೆ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದರು.

ವಾಸ್ತವಿಕ ಸತ್ಯ ಏನೆಂದರೆ, ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣವನ್ನೂ ತೆಲಂಗಾಣಕ್ಕೆ ತೆಗೆದುಕೊಂಡು ಹೋಗಿ ದುರ್ಬಳಕೆ ಮಾಡಿದ್ದು, ರಾಜ್ಯದ ಜನರ ಮುಂದಿದೆ ಎಂದು ಗಮನ ಸೆಳೆದರು. ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರಕಾರವಿದ್ದು, ಇವರ ವೈಫಲ್ಯ ಮುಚ್ಚಿಹಾಕಲು ಕೇಂದ್ರ ಸರಕಾರ ದೂರುವ ಕೆಲಸ ಮಾಡುತ್ತಾರೆ ಎಂದು ಆರೋಪಿಸಿದರು.

ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಅವರು ಪ್ರಶ್ನೆಗೆ ಉತ್ತರಿಸಿ, ನಳ್ಳಿಗಳಲ್ಲಿ ನೀರು ಬರಿಸುವ ಜವಾಬ್ದಾರಿ ರಾಜ್ಯ ಸರಕಾರದ್ದು ಎಂದು ತಿಳಿಸಿದರು. ರಾಜ್ಯ ಸರಕಾರಕ್ಕೆ ಜಲಜೀವನ್ ಯೋಜನೆಯಡಿ ಅನುದಾನ ನೀಡಲಾಗುತ್ತದೆ. ಆ ಹಣದ ಸದುಪಯೋಗ ಮಾಡಿ, ಸುರಕ್ಷಿತ, ಶುದ್ಧವಾದ ಕುಡಿಯುವ ನೀರನ್ನು ಪ್ರತಿ ಮನೆಗೂ ಕೊಡುವ ಜವಾಬ್ದಾರಿ ರಾಜ್ಯ ಸರಕಾರದ ಮೇಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ನಕಲಿ ವೈದ್ಯನ ವಿರುದ್ಧ ಕ್ರಮ ಯಾವಾಗ..?

ಸಮರ್ಪಕ ನೀರಿನ ಮೂಲವನ್ನು ಗುರುತಿಸದೇ ಇರುವುದು ರಾಜ್ಯ ಸರಕಾರದ ವೈಫಲ್ಯ. ಕೆರೆ, ಹೊಳೆ, ಹಳ್ಳ, ಡ್ಯಾಂಗಳಿಂದ ಕೊಡುವ ಕೆಲಸ ಮಾಡಿದರೆ ಅದು ಖಾಯಂ ಆಗಿರುತ್ತದೆ. ಕೇಂದ್ರ ಸರಕಾರದ ಹಣವನ್ನು ಬಳಸಿ ಸಮರ್ಪಕವಾಗಿ ಅನುಷ್ಠಾನ ಮಾಡುವುದು ರಾಜ್ಯ ಸರಕಾರದ ಕೆಲಸ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ನಕಲಿ ವೈದ್ಯನ ವಿರುದ್ಧ ಕ್ರಮ ಯಾವಾಗ..?
Next: ರಾಜ್ಯಸಭೆಯ 4 ಸ್ಥಾನಗಳಿಗೆ ಕರ್ನಾಟಕದಿಂದ ಅವಿರೋಧವಾಗಿ ಆಯ್ಕೆ

Views:

25

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.