ದೆಹಲಿ: ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು (ಗುರುವಾರ ಜೂನ್ 11) ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿರುವ ಕುರಿತಾಗಿ ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಫೋಟೋ ಹಂಚಿಕೊಂಡಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಕುರಿತಾಗಿ ಹಲವಾರು ಯೋಜನೆಗಳು, ಮೂಲಸೌಕರ್ಯ, ಹೂಡಿಕೆ, ನಗರ ಚಲನಶೀಲತೆ, ನೀರಾವರಿ, ನಾವೀನ್ಯತೆ ಮತ್ತು ನಮ್ಮ ಜನರ ಜೀವನದ ಮೇಲೆ ನೇರವಾಗಿ ಪರಿಣಾಮ ಬೀರುವ ಕಲ್ಯಾಣ ಉಪಕ್ರಮಗಳು ಸೇರಿದಂತೆ ಕರ್ನಾಟಕದ ಅಭಿವೃದ್ಧಿ ಆದ್ಯತೆಗಳ ಕುರಿತು ಚರ್ಚಿಸಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳು ನಂಗೂ ಫ್ರೀ, ನಿಂಗೂ ಫ್ರೀ, ಅಂದೋರು ಈಗ ಯಾಕೆ ಕಂಡಿಷನ್ ಹಾಕ್ತಿದ್ದಾರೆ: ಸಿ.ಟಿ ರವಿ
ಕರ್ನಾಟಕವು ಯಾವಾಗಲೂ ಭಾರತದ ಬೆಳವಣಿಗೆಯ ಕಥೆಯಲ್ಲಿ ಪ್ರಮುಖ ಕೊಡುಗೆ ನೀಡಿದೆ ಮತ್ತು ಆ ಪಾತ್ರವನ್ನು ಮತ್ತಷ್ಟು ಬಲಪಡಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸಿದೆ ಎಂದು ಹೇಳಿದ್ದಾರೆ. ಅಭಿವೃದ್ಧಿಯನ್ನು ವೇಗಗೊಳಿಸಲು, ಹೆಚ್ಚಿನ ಅವಕಾಶಗಳನ್ನು ಆಕರ್ಷಿಸಲು ಮತ್ತು ಕರ್ನಾಟಕದ ಜನರ ಆಕಾಂಕ್ಷೆಗಳನ್ನು ಪೂರೈಸಲು ಸಹಕಾರಿ ಒಕ್ಕೂಟದ ಉತ್ಸಾಹದಲ್ಲಿ ಕೇಂದ್ರ ಸರ್ಕಾರದೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ಬರೆದುಕೊಂದಿದ್ದಾರೆ.
