ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ ಎಬ್ಬಿಸಿದ ಪ್ರಕರಣ ಇದೀಗ ಈ ಪ್ರಕರಣದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ಪ್ರಕಾಶ್ ರಾಜ್ ಅವರ ಹೆಸರು ತಳುಕು ಹಾಕಿಕೊಂಡಿದೆ.
ಹೌದು, ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಟ ಪ್ರಕಾಶ್ ರಾಜ್ ಅವರ ಹೆಸರು ಎಲ್ಲೆಡೆ ಕೇಳಿ ಬರುತ್ತಿದೆ.
ಬುರುಡೆ ಪ್ರಕರಣದಲ್ಲಿ ನನ್ನ ಹೆಸರು ಕೇಳಿ ಬರುತ್ತಿರುವುದು ನನ್ನ ಗಮನಕ್ಕೆ ಬಂದಿದೆ ಹಾಗಾಗಿ ನಾನು ಸದ್ಯದಲ್ಲಿಯೇ ಇದಕ್ಕೆ ಉತ್ತರ ನೀಡುವುದಾಗಿ ಪ್ರಕಾಶ್ ರಾಜ್ ಅವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ವೀರಗಾಸೆ ಕಲಾರತ್ನ ಮಹದೇವಪ್ಪ ನಿಧನಕ್ಕೆ ಮಾಜಿ ಸಚಿವ ಚೆಲುವರಾಯಸ್ವಾಮಿ ಸಂತಾಪ
ಈ ಕುರಿತು ತಮ್ಮ ಎಕ್ಸ್ ಪೋಸ್ಟ್ನಲ್ಲಿ ಒಂದನ್ನು ಹಂಚಿಕೊಂಡಿರುವ ಪ್ರಕಾಶ್ ರಾಜ್ ಅವರು, ಎಲ್ಲರಿಗು ನಮಸ್ಕಾರ.. ಮಾಧ್ಯಮಗಳಲ್ಲಿ… ಸಾಮಾಜಿಕ ಜಲತಾಣಗಳಲ್ಲಿ ಧರ್ಮಸ್ತಳ ಪ್ರಕರಣದ ಕುರಿತಂತೆ ನನ್ನ ಬಗ್ಗೆ ಕೆಲವು ಸುದ್ದಿ ಚರ್ಚಿಸಲ್ಪಡುತ್ತಿರುವು ನನ್ನ ಗಮನಕ್ಕೆ ಬಂದಿದೆ. ಇದು ಅತಿ ಸೂಕ್ಷ್ಮವಾದ ..ಮತ್ತು ಕೋಟ್ಯಾಂತರ ಭಕ್ತರ ನಂಬಿಕೆಗೆ ಧಕ್ಕೆ ತಂದಿರುವ ಪ್ರಕರಣವಾಗಿರುವುದರಿಂದ..ಈ ರೀತಿಯ ಅನುಮಾನಗಳಿಗೆ ಉತ್ತರಿಸಬೇಕಾಗಿರುವುದು ನನ್ನ ಕರ್ತವ್ಯವೂ ಆಗಿದೆ .ನಾನು ದೂರದೂರಿನಲ್ಲಿದ್ದೇನೆ. ಇನ್ನೆರಡು ದಿನಗಳಲ್ಲಿ ನಾನೇ ಸ್ವತಃ ಬಂದು ಮಾಧ್ಯಮ ಮಿತ್ರರ ಮುಖೇನ ಉತ್ತರಿಸುತ್ತೇನೆ. ಅಲ್ಲಿಯವರೆಗೆ ಗಾಳಿಮಾತುಗಳನ್ನು ಮತ್ತು ಕೆಲವು ದುರುಳರು ಈ ಸುದ್ದಿಗೆ ಕಟ್ಟಲೆತ್ನಿಸುತ್ತಿರುವ ರೆಕ್ಕೆ ಪುಕ್ಕಗಳನ್ನು ನಂಬದಿರಿ ಎಂದು ಜನರಲ್ಲಿ ನಟ ಪ್ರಕಾಶ್ ರಾಜ್ ಮನವಿ ಮಾಡಿದ್ದಾರೆ.
