ದೆಹಲಿ: ಕರ್ನಾಟಕ ರಾಜ್ಯದ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ ಗೊಂಡಿರುವ ಬಿಕೆ ಹರಿಪ್ರಸಾದ್ ಅವರು ಇಂದು (ಶುಕ್ರವಾರ ಜೂ. 12) ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ.
ನಂತರ ಮಾತನಾಡಿದ ಅವರು, ಸೋನಿಯಾ ಗಾಂಧಿ ಅವರ ನಾಯಕತ್ವದ ಗುಣಗಳು, ಸಾರ್ವಜನಿಕ ಜೀವನದ ಮೌಲ್ಯಗಳು ಮತ್ತು ಪಕ್ಷದ ಕಾರ್ಯಕರ್ತರ ಮೇಲಿನ ಕಾಳಜಿ ನನಗೆ ಸದಾ ಸ್ಫೂರ್ತಿ ಎಂದಿದ್ದಾರೆ.
ಪಕ್ಷ ಸಂಘಟನೆಯ ಬಲವರ್ಧನೆ, ಜನರ ಆಶೋತ್ತರಗಳಿಗೆ ಸ್ಪಂದನೆ ಹಾಗೂ ಕಾಂಗ್ರೆಸ್ ಸಿದ್ಧಾಂತಗಳನ್ನು ಮತ್ತಷ್ಟು ಗಟ್ಟಿಯಾಗಿ ಜನರಿಗೆ ತಲುಪಿಸುವ ಕುರಿತು ಅವರ ಅಮೂಲ್ಯ ಮಾರ್ಗದರ್ಶನ ಪಡೆದಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗೆಲುವಿನ ಪ್ರಮಾಣ ಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ್ ಖರ್ಗೆ
