ಬೆಂಗಳೂರು: ಡಿಕೆ ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ದೆಹಲಿಗೆ ಪ್ರಯಾಣ ಬೆಳೆಸಿ ಮೂರು ದಿನಗಳ ಬಳಿಕ ಬೆಂಗಳೂರಿಗೆ ಆಗಮಿಸಿದ ಅವರು ಇಂದು (ಶನಿವಾರ ಜೂನ್ 13) ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆಸಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿ ಆಡಳಿತಾತ್ಮಕ ವಿಷಯಗಳ ಕುರಿತು ಚರ್ಚೆ ನಡೆಸಿದರು.
ಈ ಸಭೆಯಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ, ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ, ಕೃಷ್ಣ ಬೈರೇಗೌಡ, ಶರಣ್ ಪ್ರಕಾಶ್ ಪಾಟೀಲ್, ಯು.ಟಿ. ಖಾದರ್, ಭೈರತಿ ಸುರೇಶ್ ಹಾಗೂ ಯತೀಂದ್ರ ಸಿದ್ದರಾಮಯ್ಯ ಉಪಸ್ಥಿತರಿದ್ದರು.
ಇದಲ್ಲದೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಸಭೆಯಲ್ಲಿ ಜಿಲ್ಲೆಗಳ ಅಭಿವೃದ್ಧಿ ಕಾರ್ಯಗಳು, ಆಡಳಿತಾತ್ಮಕ ಕಾರ್ಯಕ್ಷಮತೆ ಹಾಗೂ ಕಾನೂನು-ಸುವ್ಯವಸ್ಥೆ ಸಂಬಂಧಿತ ವಿಷಯಗಳ ಕುರಿತು ಚರ್ಚೆ ನಡೆದಿದ್ದು, ಮುಂದಿನ ಕ್ರಮಗಳ ಬಗ್ಗೆ ಸೂಚನೆಗಳನ್ನು ನೀಡಲಾಗಿದೆ.
