ಬೆಂಗಳೂರು: ರಾಮನಗರದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಕಳೆದ ಎರಡು ದಿನಗಳಿಂದ ಎದೆ ನೋವು ಕಾಣಿಸಿಕೊಂಡಿದ್ದಕ್ಕೆ ಇಕ್ಬಾಲ್ ಹುಸೈನ್ ಅವರು ಬೆಂಗಳೂರಿನಲ್ಲಿರುವ ವೈದೇಹಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಆಸ್ಪತ್ರೆಗೆ ದಾಖಲಾಗಿರುವ ಇಕ್ಬಾಲ್ ಹುಸೈನ್ ಅವರನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು (ಜೂ. 15) ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ನಂತರ ಮಾತನಾಡಿದ ಅವರು, ಇಕ್ಬಾಲ್ ಹುಸೇನ್ ಅವರು ಆರೋಗ್ಯವಾಗಿದ್ದಾರೆ ನಾನು ವೈದ್ಯರ ಜೊತೆಯಲ್ಲಿ ಮಾತನಾಡಿದ್ದೆ ವೈದ್ಯರು ಕೂಡ ತಿಳಿಸಿದ್ದಾರೆ ಅವರಿಗೆ ಯಾವುದೇ ರೀತಿ ತೊಂದರೆ ಇಲ್ಲ ಅವರು ಆರೋಗ್ಯವಾಗಿದ್ದಾರೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಯವರೊಂದಿಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕೂಡ ಆಸ್ಪತ್ರೆಗೆ ಆಗಮಿಸಿ ಶಾಸಕರ ಆರೋಗ್ಯ ವಿಚಾರಿಸಿದರು.
ಇಕ್ಬಾಲ್ ಹುಸೇನ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ. ಶ್ರೀನಿವಾಸ್ ಮಾತನಾಡಿ, ಆಂಜಿಯೋಗ್ರಾಂ ವೇಳೆ ರಕ್ತನಾಳಗಳಲ್ಲಿ ಬ್ಲಾಕ್ ಇರುವುದನ್ನು ಪತ್ತೆ ಮಾಡಲಾಗಿದೆ. ಅಗತ್ಯ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಮುಂದಿನ ಹಂತದಲ್ಲಿ ಬೈಪಾಸ್ ಶಸ್ತ್ರಚಿಕಿತ್ಸೆ ಮಾಡಲಾಗುವುದು. ಶಸ್ತ್ರಚಿಕಿತ್ಸೆಯ ಬಳಿಕ ಸುಮಾರು 10 ದಿನಗಳ ಕಾಲ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
