Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಾಜಿ ಸಚಿವ ವಿರುದ್ಧ ಭ್ರಷ್ಟಾಚಾರ ಆರೋಪ ರಾಜ್ಯಪಾಲರಿಗೆ ದೂರು!
  • Bangalore
  • Politics
  • State

ಮಾಜಿ ಸಚಿವ ವಿರುದ್ಧ ಭ್ರಷ್ಟಾಚಾರ ಆರೋಪ ರಾಜ್ಯಪಾಲರಿಗೆ ದೂರು!

Praja Vahini June 17, 2026 1 minute read
WhatsApp Image 2026-06-17 at 11.14.14
Spread the love

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ಸಂದರ್ಭದಲ್ಲಿ ಅವರ ಸಚಿವ ಸಂಪುಟದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿದ್ದ ಹೆಚ್‌ಸಿ ಮಹದೇವಪ್ಪ ಅವರು ಹಲವಾರು ಭ್ರಷ್ಟಾಚಾರ ಮಾಡಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಹೌದು, ಮಾಜಿ ಸಚಿವ ಹೆಚ್‌ಸಿ ಮಹದೇವಪ್ಪ ಅವರು ಬ್ರಷ್ಟಾಚಾರ ಹಾಗೂ ಟೆಂಡರ್ ಅಕ್ರಮಗಳು ಕೇಳಿ ಬರುತ್ತಿರುವ ಸಂಬಂಧ ಇದೀಗ ಮಾಜಿ ಸಚಿವ ಹೆಚ್‌ಸಿ ಮಹದೇವಪ್ಪ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿದೆ.

ಬೆಂಗಳೂರು ನಿವಾಸಿಯೊಬ್ಬರು ಸಲ್ಲಿಸಿರುವ ದೂರಿನಲ್ಲಿ, ಮಹದೇವಪ್ಪ ಅವರು ಸಚಿವರಾಗಿದ್ದ ಅವಧಿಯಲ್ಲಿ ಸಾಮಾಜಿಕ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (KREIS) ಹಾಗೂ ಅಂಬೇಡ್ಕರ್ ಅಭಿವೃದ್ಧಿ ನಿಗಮ/ಮಂಡಳಿಯ ಟೆಂಡರ್ ಪ್ರಕ್ರಿಯೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ.

ಟೆಂಡರ್‌ಗಳನ್ನು ಪಾರದರ್ಶಕ ಹಾಗೂ ಸ್ಪರ್ಧಾತ್ಮಕ ಪ್ರಕ್ರಿಯೆಯ ಬದಲು ನಿರ್ದಿಷ್ಟ ವ್ಯಕ್ತಿಗಳು ಹಾಗೂ ಸಂಸ್ಥೆಗಳಿಗೆ ಅನುಕೂಲವಾಗುವಂತೆ ಮಂಜೂರು ಮಾಡಲಾಗಿದೆ ಎಂಬ ಆರೋಪವೂ ದೂರಿನಲ್ಲಿ ಉಲ್ಲೇಖವಾಗಿದೆ. ಜೊತೆಗೆ ನಕಲಿ ಹಾಗೂ ತಿರುಚಿದ ದಾಖಲೆಗಳನ್ನು ಬಳಸಿ ಕೆಲವು ಸಂಸ್ಥೆಗಳು ಟೆಂಡರ್ ಅರ್ಹತೆ ಪಡೆದಿವೆ ಎಂದು ಆರೋಪಿಸಲಾಗಿದೆ. ಇದನ್ನೂ ಒದಿ: ಬಡವರ ಉದ್ಧಾರವೇ ನಿಜವಾದ ರಾಜಕಾರಣ

ಈ ಹಿನ್ನೆಲೆಯಲ್ಲಿ ಸ್ವತಂತ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯಪಾಲರಿಗೆ ಮನವಿ ಮಾಡಲಾಗಿದ್ದು, ಟೆಂಡರ್ ಪ್ರಕ್ರಿಯೆ, ಅರ್ಹತಾ ದಾಖಲೆಗಳು, ಅಧಿಕಾರಿಗಳ ಪಾತ್ರ ಹಾಗೂ ನಿಯಮ ಪಾಲನೆ ಕುರಿತು ಸಮಗ್ರ ಪರಿಶೀಲನೆ ನಡೆಸಬೇಕೆಂದು ಆಗ್ರಹಿಸಲಾಗಿದೆ.

 

About the Author

Praja Vahini

Editor

View All Posts

Spread the love

Post navigation

Previous: ಬಡವರ ಉದ್ಧಾರವೇ ನಿಜವಾದ ರಾಜಕಾರಣ
Next: ನಮ್ಮ ಪಕ್ಷದಲ್ಲಿ ಏನಿದೆ ಅಂತ ನಾವು ಆಪರೇಷನ್ ಮಾಡೋಣ?: ಹೆಚ್​​ಡಿಕೆ

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.