ಜಯನಗರ: ಚಂದ್ರಗುಪ್ತಮೌರ್ಯ ಆಟದ ಮೈದಾನದಲ್ಲಿ ರಕ್ಷಾ ಫೌಂಡೇಷನ್ ವತಿಯಿಂದ 14ನೇ ವರ್ಷದ ಉಚಿತ ನೋಟ್ ಪುಸ್ತಕ ವಿತರಣೆ ಮತ್ತು ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಮತ್ತು ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ, ಸಂಘ, ಸಂಸ್ಥೆಗಳಿಗೆ ದೇಣಿಗೆ, ವಿಕಲಚೇತನರಿಗೆ ವೀಲ್ ಚೇರ್ ವಿತರಣೆ ಕಾರ್ಯಕ್ರಮ ನಡೆಯಿತು.
ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ರವರು, ಸಂಸದರಾದ ತೇಜಸ್ವಿಸೂರ್ಯ, ರಕ್ಷಾ ಫೌಂಡೇಷನ್ ಅಧ್ಯಕ್ಷರು, ಶಾಸಕರಾದ ಸಿ.ಕೆ.ರಾಮಮೂರ್ತಿರವರು, ಶಾಸಕರುಗಳಾದ ಎಂ.ಕೃಷ್ಣಪ್ಪ ರವಿಸುಬ್ರಹ್ಮಣ್ಯ, ಸತೀಶ್ ರೆಡ್ಡಿ, ಬಿಗ್ ಬಾಸ್ ವಿನ್ನರ್ ನಟ ಗಿಲ್ಲಿ, ಜಯದೇವ ಆಸ್ಪತ್ರೆ ನಿರ್ದಶಕ ಡಾ.ಜಿ.ದಿನೇಶ್ , ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಶ್ರೀಮತಿ ನಾಗರತ್ನ ರಾಮಮೂರ್ತಿರವರು, ಕೇಂದ್ರ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸಪ್ತಗಿರಿಗೌಡರು,ನಟಿ ತಾರ ಆನುರಾಧರವರು ದೀಪ ಬೆಳಗಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಮಾತನಾಡಿದ ವಿರುದ್ಧ ಪಕ್ಷದ ನಾಯಕ ಆರ್ ಅಶೋಕ್ ಅವರು, ಪ್ರತಿವರ್ಷ ರಕ್ಷಾ ಫೌಂಡೇಷನ್ ವತಿಯಿಂದ ಮಕ್ಕಳ ಶಿಕ್ಷಣಕ್ಕಾಗಿ ಉಚಿತ ನೋಟ್ ಪುಸ್ತಕ, ಲ್ಯಾಪ್ ಟಾಪ್, ವಿದ್ಯಾರ್ಥಿ ವೇತನ ಪವಿತ್ರವಾದ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ವಿಜಯಪುರ, ಬಾಗಲಕೋಟೆ ಭಾಗದ ಜನರ ಬಹು ದಿನಗಳ ಬೇಡಿಕೆಗೆ ಮನ್ನಣೆ: ಎಂ ಬಿ ಪಾಟೀಲ
ಅಡಂಬರ, ಪ್ರಚಾರವಿಲ್ಲದೇ ಸಮಾಜಕ್ಕೆ ಸೇವೆ ಸಲ್ಲಿಸಬೇಕು ಎಂದು ರಕ್ಷಾ ಫೌಂಡೇಷನ್ ಸಮಾಜಮುಖಿಯಾಗಿ ಕೆಲಸ ಮಾಡುತ್ತಿದೆ. ರಾಜಕಾರಣಿಗಳು ಓಟಿನ ರಾಜಕೀಯ ಮಾಡಬೇಡಿ, ಪ್ರತಿಯೊಬ್ಬ ಶಾಸಕರು ಸಿ.ಕೆ.ರಾಮಮೂರ್ತಿಯವರಂತೆ ಮಕ್ಕಳು ಶಿಕ್ಷಣಕ್ಕೆ ಸಹಾಯ, ಸಹಕಾರ ನೀಡಬೇಕು. ಸರ್ಕಾರಿ ಶಾಲೆಗಳು ಅಭಿವೃದ್ಧಿಯಾಗಬೇಕು ಎಂದರು.
