ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಂಡೆಪಾಳ್ಯ ಸರ್ಕಾರಿ ಶಾಲಾ ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯಪುಸ್ತಕಗಳನ್ನು ವಿತರಿಸುವ ಕಾರ್ಯಕ್ರಮವನ್ನು ಜಯರಾಮ ರೆಡ್ಡಿರವರು ಆಯೋಜಿಸಿದ್ದರು.
ಈ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಬೃಹತ್ ಮತ್ತು ನೀರಾವರಿ ಸಚಿವರಾದ ರಾಮಲಿಂಗ ರೆಡ್ಡಿ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಅಧ್ಯಕ್ಷರಾದ ವಾಸುದೇವ ರೆಡ್ಡಿ ಟಿ, ರಾಜ್ಯ ಪ್ರಚಾರ ಸಮಿತಿ ಸಂಯೋಜಕರಾದ ಕೆ ವಾಸುದೇವ ರೆಡ್ಡಿ, ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣಾರೆಡ್ಡಿ, ಮಂಗಮ್ಮನಪಾಳ್ಯ ಹಿರಿಯ ಮುಖಂಡರಾದ ಎಬಿ ಡಬ್ಲ್ಯೂ ನಾಗರಾಜ, ಇನ್ನು ಅನೇಕ ಮುಖಂಡರುಗಳು ಮತ್ತು ಶಾಲಾ ಶಿಕ್ಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು. ಇದನ್ನೂ ಓದಿ: ಬಿಕೆ ಹರಿಪ್ರಸಾದ್ ಪದಗ್ರಹಣ ಕಾರ್ಯಕ್ರಮದಲ್ಲಿ ಸಿದ್ದು ಮನದಾಳದ ಮಾತು
