Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • 280 ವಿದ್ಯಾರ್ಥಿಗಳಿಗೆ ಅಕ್ಷರಾಭ್ಯಾಸ
  • Bangalore
  • Politics
  • State

280 ವಿದ್ಯಾರ್ಥಿಗಳಿಗೆ ಅಕ್ಷರಾಭ್ಯಾಸ

Praja Vahini June 23, 2026
WhatsApp Image 2026-06-23 at 12.55.05
Spread the love

ಬೆಂಗಳೂರು: ಮಹಾಲಕ್ಷ್ಮೀ ಲೇಔಟ್‌ ವಿಧಾನಸಭಾ ಕ್ಷೇತ್ರದ ವೃಷಭಾವತಿನಗರ, ಕಮಲಾನಗರ ಹಾಗೂ ಕುರುಬರಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಗಳ ಸುಮಾರು 280 ಎಲ್.ಕೆ.ಜಿ ವಿದ್ಯಾರ್ಥಿಗಳಿಗೆ ಶ್ರೀ ಆದಿಚುಂಚನಗಿರಿ ಮಠಾಧೀಶರಾದ  ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ಅಕ್ಷರಾಭ್ಯಾಸ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಮಾನ್ಯ ಕೇಂದ್ರ ರಾಜ್ಯ ಸಚಿವರಾದ ಶೋಭ ಕರಂದ್ಲಾಜೆರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಮಾಜಿ ಶಾಸಕರಾದ ನೆ.ಲ ನರೇಂದ್ರಬಾಬು, ಮಾಜಿ ಉಪ ಮೇಯರ್‌ ಶ್ರೀಮತಿ ಹೇಮಲತಾ ಗೋಪಾಲಯ್ಯ, ಮಾಜಿ ಕಾರ್ಪೊರೇಟರ್‌ ಗಳಾದ ಶ್ರೀಮತಿ ನಾಗರತ್ನ ಲೋಕೇಶ್‌, ಶ್ರೀಮತಿ ಪದ್ಮಾವತಿ ಶ್ರೀನಿವಾಸ್ ರಾಜೀವ್‌ ಗಾಂಧಿ ವಿಶ್ವ ವಿದ್ಯಾಲಯದ ಸೆನೆಟ್‌ ಸದಸ್ಯರಾದ ಡಾ. ಜಿ.ಮಂಜುನಾಥ್‌ ಗೌಡ, ಡಿ.ಡಿ.ಪಿ.ಐ ಆಂಜನಪ್ಪ, ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳಿಗೆ ಶುಭ ಹಾರೈಸಿದರು.

ಸ್ವಾಮೀಜಿಯವರು ಮಾತನಾಡುತ್ತಾ ಹೋಮಕುಂಡದಲ್ಲಿ ಅರ್ಪಿಸುವ ಹವಿಸ್ಸನ್ನು ಉದಾಹರಣೆಯಾಗಿ ನೀಡಿ, ತ್ಯಾಗವೇ ಮುಕ್ತಿಗೆ ಮಾರ್ಗ ಎಂದರು.

ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆಯವರು ಮಾತನಾಡುತ್ತಾ, ಜ್ಞಾನವೇ ಮುಕ್ತಿಗೆ ದಾರಿ, ನಾಶವಿಲ್ಲದ ಜ್ಞಾನವನ್ನು ಮಕ್ಕಳಿಗೆ ಕಲಿಸುವ ಮುನ್ನ ತಂದೆ ತಾಯಿಯಂದಿರು ಜ್ಞಾನವಂತರಾಗಬೇಕು. ಅಮೃತತ್ವದ ಸ್ಥಿತಿಯನ್ನು ತಲುಪಲು ಮೊದಲು ನಮಗೆ ನಾಶವಿಲ್ಲದ ಜ್ಞಾನದ ಅವಶ್ಯಕತೆ ಇದೆ. ಅಂತಹ ಜ್ಞಾನದ ಸಾಂಪ್ರದಾಯಿಕ ಆರಂಭವೇ ಇಂದಿನ ಅಕ್ಷರಾಭ್ಯಾಸ ಎಂದು ಎಲ್ಲರಿಗೂ ಶುಭ ಹಾರೈಸಿದರು.

ಶಾಸಕರಾದ ಗೋಪಾಲಯ್ಯರವರು ಮಾತನಾಡುತ್ತಾ, ನನ್ನ ಕ್ಷೇತ್ರದಲ್ಲಿ ಕೋಟ್ಯಂತರ ರೂಪಾಯಿಗಳ ವೆಚ್ಚದಲ್ಲಿ 5 ಅತ್ಯುತ್ತಮ ಸರ್ಕಾರಿ ಶಾಲೆಗಳನ್ನು ನಿರ್ಮಿಸಲಾಗಿದೆ. ಬಡವರ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕೆನ್ನುವುದೇ ನನ್ನ ಉದ್ದೇಶ. ಇದರ ಫಲವಾಗಿ ಕೇವಲ 200 ಮಕ್ಕಳಿದ್ದ ಈ ಶಾಲೆಗಳಲ್ಲಿ ಈಗ ಎಲ್.ಕೆ.ಜಿಯಿಂದ 10ನೇ ತರಗತಿಯವರೆಗೆ 7000 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇದನ್ನೂ ಓದಿ: ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡಲಿ: ಬೊಮ್ಮಾಯಿ

ಅವರುಗಳಿಗೆ ಯಾವುದೇ ಕೊರತೆಯಾಗಬಾರದೆಂದು, ಖಾಸಗಿ ಶಾಲೆಗಳ ಮಾದರಿಯಲ್ಲೇ ಸರ್ಕಾರಿ ಶಾಲೆಯ ಎಲ್‌ಕೆಜಿ ಮತ್ತು ಯುಕೆಜಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಇಂಗ್ಲಿಷ್ ಹಾಗೂ ಕನ್ನಡ ಮಾಧ್ಯಮದ ಪಠ್ಯಪುಸ್ತಕಗಳು, ಬ್ಯಾಗ್ ಮತ್ತು ಸ್ವೆಟರ್‌ಗಳನ್ನು ಶ್ರೀ ಮಹಾಲಕ್ಷ್ಮಿ ಎಜುಕೇಶನಲ್ ಟ್ರಸ್ಟ್ ವತಿಯಿಂದ ಉಚಿತವಾಗಿ ನೀಡಲಾಗುತ್ತಿದೆ. 10ನೇ ತರಗತಿಯ 10000 ಸ್ಟೇಟ್‌ ಸಿಲೆಬಸ್‌ ವಿದ್ಯಾರ್ಥಿಗಳಿಗೆ ಉಚಿತವಾಗಿ ಪರೀಕ್ಷಾ ಮಾರ್ಗದರ್ಶಿ ಪುಸ್ತಕಗಳನ್ನು ವಿತರಿಸಲಾಗಿದೆ. ಇದರ ಫಲವಾಗಿ ಈ ಸಾಲಿನಲ್ಲಿ ಮಕ್ಕಳು ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಎಲ್‌ಕೆಜಿಯಿಂದ ಪಿಯುಸಿವರೆಗೆ ಶಿಕ್ಷಣ ನೀಡುತ್ತಿರುವ ಈ ಆವರಣದಲ್ಲೇ ಮುಂದಿನ ದಿನಗಳಲ್ಲಿ ಡಿಗ್ರಿ ಕಾಲೇಜನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕರು ಭರವಸೆಯನ್ನು ನೀಡಿದರು.

About the Author

Praja Vahini

Editor

View All Posts

Spread the love

Post navigation

Previous: ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡಲಿ: ಬೊಮ್ಮಾಯಿ
Next: ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ಒತ್ತಾಯ: ಬಿ.ವೈ.ರಾಘವೇಂದ್ರ

Views:

33

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.