ಬೆಂಗಳೂರು: ನಾಡಿನಾದ್ಯಂತ ಇಂದು (ಶುಕ್ರವಾರ ಜೂ 26) ಮೊಹರಂ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಯಾವುದೇ ಜಾತಿ ಭೇದ ಭಾವವಿಲ್ಲದೆ ಭಾವೈಕ್ಯತೆ ಮೇರೆಯಲ್ಲಿ ಮೊಹರಂ ಹಬ್ಬವನ ಬಹಳ ಸಡಗರದಿಂದ ಆಚರಿಸಲಾಗುತ್ತಿದೆ.
ಇನ್ನು ಹಳ್ಳಿ ಪ್ರದೇಶಗಳಲ್ಲಿ ಮೊಹರಂ ಹಬ್ಬವನ್ನು ಮುಸ್ಲಿಮರಿಗಿಂತ ಹೆಚ್ಚಾಗಿ ಹಿಂದೂಗಳೇ ಆಚರಣೆಯಲ್ಲಿ ತೊಡಗಿಕೊಳ್ಳುತ್ತಾರೆ. ಯಾವುದೇ ಜಾತಿ, ಭೇದ ಭಾವ ಎನ್ನದೆ ಪ್ರತಿಯೊಬ್ಬರು ಒಂದಾಗಿ ಮೊಹರಂ ಹಬ್ಬವನ್ನು ಬಹಳ ಸಡಗರದಿಂದ ಆಚರಿಸಲಾಗುತ್ತದೆ.
ಪ್ರಮುಖವಾಗಿ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಾದ ಕೊಪ್ಪಳ, ಗದಗ, ಬಾಗಲಕೋಟೆ, ಬಿಜಾಪುರ ಹಾಗೂ ಇನ್ನಿತರ ಜಿಲ್ಲೆಗಳಲ್ಲಿ ಮೊಹರಂ ಹಬ್ಬವನ್ನು ಬಹಳ ಅದ್ದೂರಿಯಾಗಿ ಆಚರಿಸಲಾಗುತ್ತದೆ. ಇದನ್ನೂ ಓದಿ: ಧರ್ಮಸ್ಥಳ ಸಭೆಗೆ ಬ್ರೇಕ್, ಬೇಸರಗೊಂಡ ವಿಜಯೇಂದ್ರ ಧರ್ಮಸ್ಥಳಕ್ಕೆ ಭೇಟಿ
ಅಲ್ಲದೆ ಹಳ್ಳಿ ಪ್ರದೇಶಗಳಲ್ಲಿ ಯುವಕರು ಮೊಹರಂ ಹಬ್ಬದ ಪ್ರಯುಕ್ತ ಜನಪದ ಗೀತೆಯನ್ನು ರಚಿಸಿ ಆ ಗೀತೆಗೆ ತಾಳಬದವಾಗಿ ಹೆಜ್ಜೆ ಹಾಕುತ್ತಾರೆ. ಹತ್ತು ದಿನಗಳ ಕಾಲ ನಡೆಯುವ ಮೊಹರಂ ಹಬ್ಬಕ್ಕೆ ಇಂದು ಕೊನೆಯ ದಿನವಾಗಿದ್ದು ಎಲ್ಲರೂ ಒಗ್ಗಟ್ಟಾಗಿ ಸೇರಿ ದೇವರುಗಳನ್ನ ಹೊಳೆಗೆ ಕಳಿಸುತ್ತಾರೆ.
