Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕರ್ನಾಟಕದ ಆರೋಗ್ಯ ಸೇವೆ ದೇಶದಲ್ಲೇ ಉತ್ತಮ: ಡಿ ಕೆ ಶಿವಕುಮಾರ್
  • Bangalore
  • Politics
  • State

ಕರ್ನಾಟಕದ ಆರೋಗ್ಯ ಸೇವೆ ದೇಶದಲ್ಲೇ ಉತ್ತಮ: ಡಿ ಕೆ ಶಿವಕುಮಾರ್

Praja Vahini June 28, 2026 1 minute read
WhatsApp Image 2026-06-28 at 17.04.43
Spread the love

ಬೆಂಗಳೂರು: ಮಕ್ಕಳ ಭವಿಷ್ಯಕ್ಕಾಗಿ ಸರ್ಕಾರ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ರೂಪಿಸಿದ್ದು, ರಾಜ್ಯದ ಎಲ್ಲಾ ಭಾಗದ ಪೋಷಕರು ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಬೇಕು. ಆರೋಗ್ಯಕರ ಕುಟುಂಬದಿಂದ ಆರೋಗ್ಯಕರ ರಾಜ್ಯ ಹಾಗೂ ದೇಶ ನಿರ್ಮಾಣ ಸಾಧ್ಯ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.

ನಗರದಲ್ಲಿಂದು ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆರೋಗ್ಯ ಸಚಿವ ಯು ಟಿ ಖಾದರ್ ಅವರು ಬಹಳ ಬುದ್ಧಿವಂತರು. ನನ್ನ ಮೊಮ್ಮಗಳಿಗೆ ಒಂದು ತಿಂಗಳು. ಹೀಗಾಗಿ ಈ ಕಾರ್ಯಕ್ರಮಕ್ಕೆ ನನ್ನ ಮನೆಯನ್ನೇ ಆಯ್ಕೆ ಮಾಡಿದ್ದಾರೆ. ಮುಖ್ಯಮಂತ್ರಿ ಮನೆಯಿಂದ ಈ ಅಭಿಯಾನ ಆರಂಭವಾಗಲಿ ಎಂಬುದು ಖಾದರ್ ಅವರ ಸದಾಶಯ. ಹೀಗಾಗಿ ನನ್ನ ಮನೆಯಲ್ಲೇ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲು ತೀರ್ಮಾನಿಸಿದ್ದಾರೆ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ 36,686 ಲಸಿಕಾ ಕೇಂದ್ರಗಳು, 988 ಸಂಚಾರಿ ಕೇಂದ್ರಗಳು, 2,125 ಪಾಯಿಂಟ್ ಗಳು ಸೇರಿದಂತೆ ಒಟ್ಟು 1,14,213 ಲಸಿಕಾ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ಅನೇಕ ಎನ್ ಜಿಓ ಗಳು ಅಭಿಯಾನಕ್ಕೆ ಕೈಜೋಡಿಸಿವೆ. ದೇಶ ಸೇವೆಯ ಈ ಕಾರ್ಯಕ್ರಮಕ್ಕೆ ಸಹಕಾರ ನೀಡಿರುವ ಎಲ್ಲರಿಗೂ ತುಂಬು ಹೃದಯದಿಂದ ಶುಭ ಕೋರುವೆ ಎಂದರು.

60.84  ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲು ನಮ್ಮ ಸರ್ಕಾರ ತೀರ್ಮಾನಿಸಿದೆ. 1972ರಲ್ಲಿ ಇಂದಿರಾ ಗಾಂಧಿ ಅವರು ದೇಶದ ಮಕ್ಕಳು ಆರೋಗ್ಯವಾಗಿ ಇರಬೇಕು ಎಂದು ಪೋಲಿಯೋ ಲಸಿಕೆ ಕಾರ್ಯಕ್ರಮ ಮಾಡಿದರು. ರಾಜೀವ್ ಗಾಂಧಿ ಅವರ ಕಾಲದಲ್ಲಿ ಇದು ಅಭಿಯಾನವಾಗಿ ಪ್ರಾರಂಭವಾಯಿತು. ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಭಾರತ ಪೋಲಿಯೋ ಮುಕ್ತ ದೇಶವಾಯಿತು” ಎಂದು ತಿಳಿಸಿದರು.

ನಮ್ಮ ದೇಶ ಬಲಿಷ್ಠವಾಗಿದೆ. ನೆರೆ ರಾಷ್ಟ್ರಗಳಿಂದ ಮತ್ತೆ ಪೋಲಿಯೋ ಬಾರದಂತೆ ತಡೆಯಲು ನಾವು ಈ ಅಭಿಯಾನ ಮಾಡುತ್ತಿದ್ದೇವೆ. ವಿಶ್ವ ಪೋಲಿಯೋ ಲಸಿಕಾ ದಿನದ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ ಇಂದು ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ನೀಡಿ ಯಾವುದೇ ಮಕ್ಕಳು ಅಂಗವೈಕಲ್ಯಕ್ಕೆ ಒಳಗಾಗಬಾರದು ಎಂದು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಟೋಲ್ ಮುಕ್ತ ಹೆಬ್ಬಾಳ ಮೂರು ಪಥ ಜೋಡಿ ಸುರಂಗ ಮಾರ್ಗಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ
Next: ಒತ್ತಡದಲ್ಲಿ ಕೆಲಸ ಮಾಡುವ ಪತ್ರಕರ್ತರು ಆರೋಗ್ಯದ ಕಡೆ ಗಮನ‌ ಹರಿಸಲಿ

Views:

24

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.