Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಮ್ಮ ಯೋಜನೆಗಳನ್ನು ಬೇರೆ ರಾಜ್ಯದ ಮತದಾರರಿಗೆ ನೀಡಲು ಸಾಧ್ಯವೇ: ಸಿಎಂ ಡಿಕೆಶಿ
  • Bangalore
  • Politics
  • State

ನಮ್ಮ ಯೋಜನೆಗಳನ್ನು ಬೇರೆ ರಾಜ್ಯದ ಮತದಾರರಿಗೆ ನೀಡಲು ಸಾಧ್ಯವೇ: ಸಿಎಂ ಡಿಕೆಶಿ

Praja Vahini June 30, 2026 1 minute read
WhatsApp Image 2026-06-30 at 12.57.36
Spread the love

ಬೆಂಗಳೂರು: ಬೇರೆ ರಾಜ್ಯಗಳಲ್ಲಿ ಸರ್ಕಾರದ ಸೌಲಭ್ಯಗಳನ್ನು ಕೇವಲ ಮತದಾರರಿಗೆ ಮಾತ್ರ ನೀಡುತ್ತಿದ್ದು, ಮತದಾನ ಹಕ್ಕು ಇಲ್ಲದವರಿಗೆ ಸೌಲಭ್ಯ ಹಿಂಪಡೆಯಲಾಗುತ್ತಿದೆ. ಅದೇ ವ್ಯವಸ್ಥೆ ರಾಜ್ಯದಲ್ಲೂ ಬರಬಹುದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರ ನಿವಾಸದಲ್ಲಿ ಇಂದು (ಮಂಗಳವಾರ ಜೂ. 30) ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಶಿವಕುಮಾರ್ ಅವರು ಗಣತಿ ನಮೂನೆ ತುಂಬಿ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ತಮ್ಮ ಎನ್ಯುಮರೇಶನ್ ಫಾರಂ ಭರ್ತಿ ಮಾಡುವ ಮೂಲಕ ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಗೆ ಚಾಲನೆ ನೀಡಿದರು. ಇದನ್ನೂ ಓದಿ: ಸುಲೇಪೇಟ ಗ್ರಾಮದಲ್ಲಿ ವಿಜೃಂಭಣೆಯ ಕಾರ ಹುಣ್ಣಿಮೆ ಆಚರಣೆ

ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಆರಂಭವಾಗಿದ್ದು, ನನ್ನ ಮನೆಯಿಂದಲೇ ಈ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ನನ್ನ ಎನ್ಯುಮರೇಷನ್ ಅರ್ಜಿಯನ್ನು ಭರ್ತಿ ಮಾಡಿ ಸಹಿ ಮಾಡಿ ಸಲ್ಲಿಕೆ ಮಾಡಿರುವೆ. ನೀವು ನಿಮ್ಮ ಹೆಸರಿನ ಜೊತೆಗೆ ಈ ಹಿಂದೆ ಮತದಾರ ಪಟ್ಟಿ ಸಮಯದಲ್ಲಿ ನೀಡಲಾಗಿದ್ದ ದೂರವಾಣಿ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ. ಇಲ್ಲವಾದರೆ ಹೊಸ ಮೊಬೈಲ್ ಸಂಖ್ಯೆಯನ್ನು ಅಧಿಕಾರಿಗಳ ಮೂಲಕ ಸೇರ್ಪಡೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು. ಯಾವ ಸಂಖ್ಯೆ ನೀಡಿರುತ್ತಿರೋ ಅದೇ ಸಂಖ್ಯೆಗೆ ಒಟಿಪಿ ಬರಲಿದೆ ಎಂದು ಮಾಹಿತಿ ನೀಡಿದರು.

ಕುಟುಂಬದವರ ಪರವಾಗಿ ಒಬ್ಬರು ಸಹಿ ಮಾಡಿದರೂ ಅರ್ಜಿ ಸ್ವೀಕಾರ

ನೀವು ನಿಮ್ಮ ಹೆಸರಿನಲ್ಲಿ ತಿದ್ದುಪಡಿ ಮಾಡಿಕೊಳ್ಳಲು ಅವಕಾಶವಿದೆ. ಬಿಎಲ್ಎ, ಬಿಎಲ್ಓ ಹಾಗೂ ಮೇಲ್ವಿಚಾರಕರು ಈಗಾಗಲೇ ವಾಟ್ಸಪ್ ಗ್ರೂಪ್ ಮಾಡಿಕೊಂಡಿದ್ದಾರೆ. ಕುಟುಂಬದ ಸದಸ್ಯರ ಪೈಕಿ ಒಬ್ಬರು ಸಹಿ ಮಾಡಿದರೂ ಸಾಕು. ಕುಟುಂಬದವರ ಪರವಾಗಿ ಒಬ್ಬರೇ ಎಲ್ಲರ ಅರ್ಜಿ ತುಂಬಬಹುದು. ಅದನ್ನು ಸ್ವೀಕಾರ ಮಾಡಿಕೊಳ್ಳಲಾಗುವುದು. ನಿಮ್ಮ ಫೋಟೋ ಬದಲಾಯಿಸಿಕೊಳ್ಳಬೇಕಾದರೆ ಅರ್ಜಿಯಲ್ಲಿ ಹೊಸ ಫೋಟೋ ನೀಡಬಹುದು. ಹೊಸ ಮತದಾರರು ನಿವಾಸ ದೃಢೀಕರಣ ಪತ್ರ ನೀಡಬೇಕು. ಕರ್ನಾಟಕ ಸರ್ಕಾರ ರಾಜ್ಯದ ಜನರಿಗೆ ಅಗತ್ಯ ಪ್ರಮಾಣಪತ್ರ ನೀಡಲು ಮುಂದಾಗಿದೆ. ಎಲ್ಲರೂ ತಮ್ಮ ಮತದಾನದ ಹಕ್ಕು ಉಳಿಸಿಕೊಳ್ಳಬೇಕು. ಉಳಿಸಿಕೊಳ್ಳದಿದ್ದರೆ ಸರ್ಕಾರ ಸೌಲಭ್ಯ, ಕಾರ್ಯಕ್ರಮಗಳನ್ನು ಪಡೆಯುವುದು ಕಷ್ಟವಾಗಲಿದೆ ಎಂದು ಮಾಹಿತಿ ನೀಡಿದರು.

 

About the Author

Praja Vahini

Editor

View All Posts

Spread the love

Post navigation

Previous: ಸುಲೇಪೇಟ ಗ್ರಾಮದಲ್ಲಿ ವಿಜೃಂಭಣೆಯ ಕಾರ ಹುಣ್ಣಿಮೆ ಆಚರಣೆ
Next: ಚಿನ್ನದ ಪದಕ ಗೆದ್ದ ವಿದ್ಯಾರ್ಥಿಗೆ ಶುಭ ಹಾರೈಸಿದ ಸಿದ್ದು  

Views:

30

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.