ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಕಾರ್ಯದರ್ಶಿಯನ್ನಾಗಿ ಹಿರಿಯ ಪತ್ರಕರ್ತರು ಹಾಗೂ ಅನುಭವಿ ಪತ್ರಕರ್ತರಾದ ಪಿ. ತ್ಯಾಗರಾಜ್ ಸೇರಿದಂತೆ ಮೂವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಪಿ. ತ್ಯಾಗರಾಜ್ ಅವರನ್ನು ಮುಖ್ಯ ಮಂತ್ರಿ ಮಾಧ್ಯಮ ಕಾರ್ಯದರ್ಶಿ-1, ಆರ್. ಜಯಪ್ರಕಾಶ್ ಅವರನ್ನು ಮುಖ್ಯಮಂತ್ರಿ ಮಾಧ್ಯಮ ಕಾವ್ಯದರ್ಶಿ -2 ಹಾಗೂ ರಾಘವೇಂದ್ರ ಭಟ್‌ರನ್ನು ಮುಖ್ಯಮಂತ್ರಿ ಮಾಧ್ಯಮ ಕಾರ್ಯದರ್ಶಿ-3 ನೇಮಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.
